• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಮಳೆ ಬಾಧಿತ ಸ್ಥಳಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
August 31, 2022
in ಕರ್ನಾಟಕ
0
ಸಿಎಂ ಡೆಲ್ಲಿ ಯಾನ: ಹಿರಿಯರಿಗೆ ಕೋಕ್, ಹೊಸಬರಿಗೆ ಕೇಕ್ ನೀಡುವರೇ ಬಿಜೆಪಿ ವರಿಷ್ಠರು?
Share on WhatsAppShare on FacebookShare on Telegram

ADVERTISEMENT

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ
ನಾಳೆ ಮಧ್ಯಾಹ್ನ 3.30 ಗಂಟೆಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ತಿಳಿಸಿದರು.

ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಬೆಂಗಳೂರು ನಗರದ ಬೊಮ್ಮನಹಳ್ಳಿ, ಮಹದೇವಪುರ ವಲಯಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಈ ಎರಡು ವಲಯಗಳಲ್ಲಿ ತೀವ್ರ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಲಾಗಿದೆ.

ಕೆಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಯಾಗಿದೆ. ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಬಹಳ ದೊಡ್ಡ ಪ್ರಮಾಣದ ಹಾನಿಯಾಗಿದೆ. ಓಆರ್ ಆರ್ ರಸ್ತೆಯಲ್ಲಿ ನೀರು ನಿಂತು, ಕೆಳಗಿನ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ಜನವಸತಿಗೆ ತೊಂದರೆಯಾಗಿದೆ. ಈ ಎಲ್ಲಾ ವಿಚಾರಗಳನ್ನು ಪರಿಶೀಲಿಸಿದಾಗ, ಮಹದೇವಪುರ ವಲಯದಲ್ಲಿ 9 ಕಡೆ, ಹಾಗೂ ಬೊಮ್ಮನಹಳ್ಳಿಯಲ್ಲಿ 11 ಕಡೆ ತೊಂದರೆಯಾಗಿದೆ. ಅಲ್ಲಿನ ಸವಳಕೆರೆ ತುಂಬಿ ಹರಿದಿದ್ದು, ಬಹಳ ಸಮಸ್ಯೆಯಾಗಿದೆ. ಓ.ಆರ್.ಆರ್. ರಸ್ತೆಯಾಗುವ ಹಂತದಲ್ಲಿ ಮುಖ್ಯ ಕಾಲುವೆ ಒಂದೆಡೆ ಕಟ್ಟಿಕೊಂಡಿದೆ. ನೀರು ನಿಲ್ಲಲು ಇರುವ ಎಲ್ಲಾ ಅಡೆತಡೆಗಳನ್ನು ಸಂಪೂರ್ಣವಾಗಿ ತೆಗೆದು, ಪೈಪ್ ಲೈನ್ ಅಳವಡಿಸಬೇಕು. ಹಾಗೂ ಓ.ಆರ್.ಆರ್ ರಸ್ತೆಯಲ್ಲಿ ನಿಂತಿತ್ತುವ ನೀರನ್ನು ಹೊರಚೆಲ್ಲಬೇಕೆಂದು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ಸೂಚಿಸಿದರು.

ಹಲವು ಬಡಾವಣೆಗಳಲ್ಲಿ ನೀರು ನಿಂತಿದೆ. ಅಲ್ಲಿ ಚರಂಡಿಗಳ ಮುಂದುವರಿಕೆ ಇಲ್ಲ. ಮುಖ್ಯ ಚರಂಡಿ ಬಡಾವಣೆಯಲ್ಲಿ ಬಂದು ನಿಂತಿದೆ. ಅದನ್ನೂ ಕೂಡ ತೆರವು ಮಾಡಿ ನೀರಿಗೆ ತನ್ನದೇ ಸಹಜ ಮಾರ್ಗಗಳನ್ನು ಸರಿ ಪಡಿಸಲು ಸೂಚಿಸಲಾಗಿದೆ ಎಂದರು.

ಬೊಮ್ಮನಹಳ್ಳಿಯಲ್ಲಿಯೂ ಕೆಲಸ ಪ್ರಾರಂಭವಾಗಿದ್ದು, ನೀರು ನಿಂತಿರುವಲ್ಲಿ ನೀರು ಹೊರಹಾಕಲು ಸೂಚಿಸಲಾಗಿದೆ. 125 ಕ್ಕಿಂತ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ವರಿಗೆ ಪರಿಹಾರ ನೀಡಲು ಕಂದಾಯ ಸಚಿವರು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದರು.

1500 ಕೋಟಿ ರೂ.ಗಳನ್ನು ರಾಜ ಕಾಲುವೆ ನಿರ್ಮಾಣ ಕಾರ್ಯಕ್ಕೆ ನೀಡಿದ್ದು, ಅವುಗಳ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ಗಳು ಪ್ರಾರಂಭವಾಗಬೇಕು. ಕಳೆದ 6 ತಿಂಗಳಿಂದ ನಿರಂತರವಾಗಿ ಮಳೆ ಬಂದದ್ದರಿಂದ ಸಮಸ್ಯೆಯಾಗಿದೆ. ಕಳೆದ 3 ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಈ ತಿಂಗಳು ಹಾಗೂ ಈ ವಾರ ಅತಿ ಹೆಚ್ವು ಮಳೆಯಾಗಿದ್ದರಿಂದ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ತುಂಬಿರುವ ನೀರು ಹಾಗೂ ಮಳೆ ನೀರು ಇಷ್ಟು ಅನಾಹುತಕ್ಕೆ ಕಾರಣವಾಗಿದೆ. ಹಿಂದೆಂದೂ ಈ ಪರಿಸ್ಥಿತಿ ಇರಲಿಲ್ಲ. ಕಳೆದ ಬಾರಿ ಯಲಹಂಕ, ಮಲ್ಲೇಶ್ವರಂ ಭಾಗದಲ್ಲಿ ಆಗಿದ್ದ ತೊಂದರೆ ಸರಿಪಡಿಸಿದ್ದರಿಂದ ಈ ಬಾರಿ ಸಮಸ್ಯೆಯಾಗಿಲ್ಲ. ಹಿಂದೆ ಈ ಭಾಗದಲ್ಲಿ ಕೆರೆಗಳು ತುಂಬಿದ್ದರಿಂದ ಸಮಸ್ಯೆಯಾಗಿದೆ. ಬರುವ ದಿನಗಳಲ್ಲಿ ಎಲ್ಲಾ ಅಡೆತಡೆ ನಿವಾರಿಸಲು ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿ ಅನುದಾನ ಅಗತ್ಯವಿದ್ದರೆ, ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ನಾಳೆ ಪರೀಕ್ಷೆ ಮಾಡಿ ಸ್ಥಳದಲ್ಲಿಯೇ ಸೂಚನೆ ನೀಡಲಾಗುವುದು. ಯಲಹಂಕದಲ್ಲಿ ಕೆಲಸ ಮಾಡಿದ್ದರಿಂದ ಈ ಬಾರಿ ತೊಂದರೆಯಾಗಿಲ್ಲ. ಕೆ.ಆರ್.ಪುರಂ ನಲ್ಲಿ ರೈಲ್ವೆ ಅನುಮತಿ ಪಡೆದು ಟೆಂಡರ್ ಕರೆದು ಕೆಲಸ ಪ್ರಾರಂಭವಾಗುತ್ತಿದೆ. ಹೊಸಕೆರೆಹಳ್ಳಿಯಲ್ಲಿಯೂ ಕೆಲಸ ಪ್ರಾರಂಭವಾಗಿದೆ. ಆಡಳಿತಾತ್ಮಕ ಅನುಮೋಡನೆಗಳನ್ನು ನೀಡಿ, ಅನುದಾನ ಬಿಡುಗಡೆಯೂ ಆಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಳ್ಳಂದೂರು ಇಕೊಸ್ಪೇಸ್ ಹಾಗೂ ಆರ್ಎಂಝಡ್ ಪ್ರದೇಶದಲ್ಲಿ ನೀರು ಸಂಗ್ರಹವನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು. ತುರ್ತಾಗಿ ನೀರು ಸಂಗ್ರಹವಾಗಿರುವುದನ್ನು ತೆರವುಗೊಳಿಸಿ. ರೇನ್ಬೋ ಲೇಔಟ್ ನಲ್ಲಿ ನೀರು ತೆಗೆದು, ಮಳೆನೀರುಗಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಿಸಲಾಗಿದೆ ಎಂದರು.

ಎಲ್ಲ ವಲಯಗಳ ಜಂಟಿ ಆಯುಕ್ತರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಜಲಮಂಡಳಿ, ಬೆಸ್ಕಾಂ ನೊಂದಿಗೆ ಸಮನ್ವಯ ವಹಿಸಿ ಕೆಲಸ ಮಾಡುವಂತೆ ಸೂಚಿಸಿದೆ ಎಂದರು.

ಮಳೆಯಾಗುತ್ತಿರುವ ಸಂದರ್ಭದಲ್ಲಿ ಸಂಚಾರ ಪೊಲೀಸರು ಸಕ್ರಿಯರಾಗಿ, ಸುಗಮ ಸಂಚಾರವನ್ನು ಖಾತರಿಪಡಿಸಬೇಕು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದೆ ಎಂದು ತಿಳಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಳೆ ನಿಂತ ಕೂಡಲೇ ಪಂಚರತ್ನ ರಥಯಾತ್ರೆ : ಹೆಚ್.ಡಿ ಕುಮಾರಸ್ವಾಮಿ

Next Post

ಏಷ್ಯಾಕಪ್: ಹಾಂಕಾಂಗ್ ವಿರುದ್ಧ ಭಾರತಕ್ಕೆ 40 ರನ್ ಜಯ

Related Posts

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
0

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು "ಕೊರಗಜ್ಜ" ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್...

Read moreDetails

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025
Next Post
ಏಷ್ಯಾಕಪ್: ಹಾಂಕಾಂಗ್ ವಿರುದ್ಧ ಭಾರತಕ್ಕೆ 40 ರನ್ ಜಯ

ಏಷ್ಯಾಕಪ್: ಹಾಂಕಾಂಗ್ ವಿರುದ್ಧ ಭಾರತಕ್ಕೆ 40 ರನ್ ಜಯ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!