ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳು ಬೆಂಗಳೂರಿನಲ್ಲಿ 9 ಕಡೆ ಏಕಕಾಲದಲ್ಲಿ ಮಧ್ಯವರ್ತಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ದಾಳಿಗೆ ಒಳಗಾಗಿರುವ ಮಧ್ಯವರ್ತಿಗಳು ಸರ್ಕಾರಿ ಅಧಿಕಾರಿಗಳಿಗೆ ಇಲ್ಲ ಸಲ್ಲದ ಆಮಿಷಗಳನ್ನು ಒಡ್ಡಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.
SP ಉಮಾ ಪ್ರಶಾಂತ್ ನೇತೃತ್ವದಲ್ಲಿ 100 ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ರಘು, ಮೋಹನ್, ರಾಮ, ಲಕ್ಷ್ಮಣ, ಆರ್.ಮುನಿರತ್ನ, ಚಿಕ್ಕಹನುಮಯ್ಯ, ಮನೋಜ್, ತೇಜು, ಅಶ್ವಥ್ ಎಂಬ ಮಧ್ಯವರ್ತಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
