ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭಾರೀ ಮಳೆ ಸುರಿದು ಹಲವು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು.
ಬುಧವಾರ ಬೆಳಿಗ್ಗೆ ರಾಜರಾಜೇಶ್ವರಿ ನಗರದಲ್ಲಿ ಸಿಎಂ ಬೊಮ್ಮಾಯಿ, ಶಾಸಕ ಮುನಿರತ್ನ ಹಾಗೂ ಬಿಜೆಪಿ ನಾಯಕರು ಕೇವಲ ಮೂರು ಮನೆ ಮತ್ತು 2 ರಸ್ತೆಗೆ ಭೇಟಿ ನೀಡಿ ಕಾಟಾಚಾರಕ್ಕೆ ಮಳೆ ಪ್ರದೇಶಕ್ಕೆ ಭೇಟಿ ನೀಡಿ ಮರಳಿದ್ದಾರೆ. ಇದರಿಂದ ಸ್ಥಳೀಯರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಬರುತ್ತಿದ್ದಂತೆ ನಾಯಕರು ವಾಪಸ್ಸಾಗಿದ್ದು ನೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.