• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
August 13, 2026
in ಕರ್ನಾಟಕ
0
ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ಆಗಸ್ಟ್ 15ರಂದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ADVERTISEMENT

 

ಸ್ವಾತಂತ್ರ್ಯ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನ, ವಾಹನ ನಿಲುಗಡೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ವಿಧಾನಸೌಧದಲ್ಲಿ ಬೆಳಗ್ಗೆ 11ರಿಂದ ರಾತ್ರಿ 10ರವರೆಗೆ ನಡೆಯಲಿರುವ ಸ್ವಾತಂತ್ರ್ಯ ಹಬ್ಬದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

‘ದಿ ಪೀಪಲ್ಸ್ ಇಂಡಿಯಾ ಪೆರೇಡ್’, ವಿಧಾನಸೌಧದ ವಿಶೇಷ ಪ್ರವಾಸ, ಮಕ್ಕಳಿಗಾಗಿ ‘ಮಕ್ಕಳ ಮೇಳ’, ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಕಚೇರಿ ಹಾಗೂ ವಿವಿಧ ಜಿಲ್ಲೆಗಳ ಆಹಾರ ಮತ್ತು ಕರಕುಶಲ ಪ್ರದರ್ಶನಗಳು ಪ್ರಮುಖ ಆಕರ್ಷಣೆಯಾಗಲಿವೆ.ಸಂಜೆಯ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ ಪಟಾಕಿ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಯಿರುವುದರಿಂದ ಭದ್ರತಾ ವ್ಯವಸ್ಥೆಯಲ್ಲಿ ವಿಶೇಷ ಗಮನ ಹರಿಸುವಂತೆ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ಪಾದಚಾರಿಗಳ ಸುರಕ್ಷತೆ, ತುರ್ತು ಸೇವೆಗಳಿಗೆ ಅಗತ್ಯ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.ಕಾರ್ಯಕ್ರಮದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ಲೋಪವಾಗದಂತೆ ಪೊಲೀಸ್, ಜಿಬಿಎ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

 

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆ, ಜಿಬಿಎ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: bangalore newsbengaluru eventsbengaluru newsbengaluru trafficBreaking NewsGBAgreater bengaluru authorityIndependence Day 2026Independence Day CelebrationIndependence Day KarnatakaKarnataka GovernmentKarnataka Independence Daykarnataka newsKarnataka Policelatest karnataka newsPeoples India ParadePriyank Khargepriyank kharge newsSecurity ArrangementsSwatantra Habba 2026Traffic ManagementVIDHANA SOUDHA
Previous Post

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

Next Post

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

Related Posts

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?
ಕರ್ನಾಟಕ

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

by ಪ್ರತಿಧ್ವನಿ
August 13, 2026
0

ಬೆಂಗಳೂರು: ಶಿವಗಂಗೆ ಬೆಟ್ಟಕ್ಕೆ ಏಕಾಂಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಕಳೆದ ಹಲವು ದಿನಗಳಿಂದ ಬೆಟ್ಟದಲ್ಲಿ ನಿರಂತರ ಶೋಧ...

Read moreDetails
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

August 12, 2026
BREAKING NEWS : ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಇಲಾಖೆ ಇಲ್ಲಿದೆ..!

ಶಿವಲಿಂಗೇಗೌಡಗೆ ಅಬಕಾರಿ, ಜಮೀರ್‌ಗೆ ವಸತಿ : ಖಾತೆ ಹಂಚಿಕೆಯಲ್ಲೂ ಸಿಎಂ ಡಿಕೆ ಶಿವಕುಮಾರ್ ದೂರದೃಷ್ಟಿಯ ನಡೆ ..

August 12, 2026
ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ  ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

ಇನ್ಮುಂದೆ ರಾಜ್ಯಾದ್ಯಂತ ಗುಟ್ಕಾ, ಪಾನ್‌ ಮಸಾಲಾ ಬ್ಯಾನ್‌ : ಹೇಳಿದ್ದನ್ನೆ ಮಾಡಿ ತೋರಿಸಿದ ಸಿಎಂ ಡಿಕೆಶಿ..

August 12, 2026
Next Post
ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada