• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು:ನಾನು ತಪ್ಪು ಮಾಡಿಲ್ಲ, ಮೈತ್ರಿ ನಾಯಕರಿಂದ ಷಡ್ಯಂತ್ರ; ಸಚಿವರ ಮುಂದೆ ಸಿಎಂ ಭಾವುಕ!

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ವಿಧಾನಸೌಧದಲ್ಲಿ ನಡೆದ ಔಪಚಾರಿಕ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಭಾಗಿಯಾಗಿದ್ದರು.

ADVERTISEMENT

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡ (MUDA Scam ), ವಾಲ್ಮೀಕಿ ನಿಗಮದ ಹಗರಣ (Valmiki Scam) ಆರೋಪ ಸಂಬಂಧ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದು, ಇದಕ್ಕೆ ಉತ್ತರಿಸುವುದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಮುಂದೇನು ಎಂಬುವುದರ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.ಬ್ರೇಕ್ ಫಾಸ್ಟ್ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಮೂಡ ಕೇಸ್ ವಿಚಾರವಾಗಿ ರಾಜ್ಯಪಾಲರು ಸರ್ಕಾರಕ್ಕೆ ನೋಟಿಸ್ ಕೊಟ್ಟಿದ್ದಾರೆ.

ಮೂಡ ನಿವೇಶನ‌ ಪಡೆಯಲು ನಾನು ಯಾವುದೇ ಪ್ರಭಾವ ಬೀರಿಲ್ಲ. ಬಿಜೆಪಿ ಅವಧಿಯಲ್ಲಿ ಕೊಟ್ಟ ನಿವೇಶನಗಳು ಅವು, ಆದರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಸಿಲುಕಿಸಲು ಹೊರಟಿದ್ದಾರೆ. ನಮ್ಮ ಪಕ್ಷದವರು ವಿಪಕ್ಷದವರ ಷಡ್ಯಂತ್ರಕ್ಕೆ ಕೈ ಜೋಡಿಸಿದ್ದಾರೆ, ಹೈಕಮಾಂಡ್‌ಗೂ ವಾಸ್ತವವನ್ನ ಮನವರಿಕೆ ಮಾಡಿಕೊಟ್ಟಿದ್ದೇನೆ. ನಾನು ಯಾವ ತಪ್ಪನ್ನೂ ಮಾಡಿಲ್ಲ, ರಾಜ್ಯಪಾಲರಿಗೆ ಉತ್ತರ ಕೊಡುವ ಕೆಲಸ ಮಾಡೋಣ. ಪ್ರಾಸಿಕ್ಯೂಷನ್‌ ವಿರೋಧಿಸಿ‌ ನಿರ್ಣಯ ಮಾಡುವಾಗ ನಾನು ಕ್ಯಾಬಿನೆಟ್‌ನಲ್ಲಿ ಇರುವುದಿಲ್ಲ.

ನೀವೇ ನಿರ್ಣಯ ಮಾಡಿ ರಾಜ್ಯಪಾಲರಿಗೆ ಕಳುಹಿಸಿ, ಉತ್ತರ ಕೊಟ್ಟ ಬಳಿಕವೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಭಾವನಾತ್ಮಕವಾಗಿ ಮಾತನಾಡಿದ್ದರು ಎನ್ನಲಾಗಿದೆ.ಇನ್ನು, ಸಭೆಯಲ್ಲಿ ಬಿಜೆಪಿ- ಜೆಡಿಎಸ್ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧಾರ ಮಾಡಲಾಗಿದ್ದು, ಗವರ್ನರ್ ಮೂಲಕ ಸರ್ಕಾರ ಉರುಳಿಸುವ ಕೆಲಸ ಎಂದು ಜನರಿಗೆ ತಿಳಿಸಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆಯಂತೆ.

ಅಲ್ಲದೇ, ಕಾನೂನು ಹೋರಾಟದ ಜೊತೆಗೆ ಹೋರಾಟದ ಮೂಲಕ ಜನರಿಗೆ ತಲುಪಿಸಲು ತಯಾರಿ ನಡೆಸಿಕೊಳ್ಳಲು ತೀರ್ಮಾನಿಸಲಾಗಿದೆಯಂತೆ.ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹಿಂಬಾಗಿಲಿನಿಂದ ಸರ್ಕಾರ ಉರುಳಿಸುವ ಪ್ರಯತ್ನ ಮಾಡಲಾಗುತ್ತಿದೆ. ನೂರಕ್ಕೆ ನೂರರಷ್ಟು ಕೇಂದ್ರ ಸರ್ಕಾರ ಆಯ್ಕೆ ಸರ್ಕಾರವನ್ನ ಬಿಳಿಸುವ ಷಡ್ಯಂತ್ರ ಮಾಡ್ತಿದೆ.

ನಾವು ಕಾನೂನು ಹೋರಾಟ, ರಾಜಕೀಯ ಹೋರಾಟ ಮಾಡ್ತೀವಿ. ರಾಜ್ಯಪಾಲ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡ್ತೀವಿ ಎಂದು ತಿಳಿಸಿದ್ದರು.ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದಾರೆ. ಅದು ತಪ್ಪು ಅಂತ ಅನ್ನಿಸುತ್ತಿದೆ, ಮೌಲ್ಯದ ಆಧಾರದ ಮೇಲೆ ಸಿಎಂ ಸಭೆಗೆ ಬರ್ತಿಲ್ಲ. ಇಂದಿನ ಕ್ಯಾಬಿನೆಟ್ ಸಭೆಗೆ ಅವರು ಬರ್ತಿಲ್ಲ, ಪ್ರಮುಖ ನಿರ್ಣಯ ಡಿಸೈಡ್ ಮಾಡೋಕೆ ಹೇಳಿದ್ದಾರೆ. ಸಭೆಯಲ್ಲಿ ನೋಟಿಸ್ ಬಗ್ಗೆ ಚರ್ಚೆಯಾಗಲಿದೆ ಎಂದು ತಿಳಿಸಿದರು.

Tags: #[pratidhvanidigitalCM Siddaramaiah‌Congress PartyDCM DK ShivakumarEnergy Minister KJ GeorgeIshwar Khandre
Previous Post

ಸಾಲಬಾಧೆ ಇಂದ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್

Next Post

ರಾಜ್ಯಸಭೆಯಲ್ಲಿ ಖರ್ಗೆ ನೋವಿನ ಮಾತು..!

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ರಾಜ್ಯಸಭೆಯಲ್ಲಿ ಖರ್ಗೆ ನೋವಿನ ಮಾತು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada