ಬೆಂಗಳೂರಲ್ಲಿ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಸಿಕ್ಕಿದ್ದ 40 ಕೋಟಿ ರೂಪಾಯಿ ಹಣ ಕಾಂಗ್ರೆಸ್ ಸರ್ಕಾರದ ಮಂತ್ರಿಯೊಬ್ಬರು ಮತ್ತು ಪ್ರಭಾವಿ ರಾಜಕಾರಣಿಯೊಬ್ಬರ ಮಗನಿಗೆ ಸೇರಿದ್ದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇದಕ್ಕೆ ಸಾಕ್ಷಿಯಾಗಿ ಪ್ರಭಾವಿ ಆ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು ಎಂದು ಯತ್ನಾಳ್ ಸ್ಫೋಟಕ ಮಾಹಿತಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
![](https://pratidhvani.com/wp-content/uploads/2023/12/WhatsApp-Image-2023-12-01-at-15.35.30-1024x152.jpeg)
ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು.
ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ.
ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು. ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ.
ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ.