• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಶಾಸಕರೆಲ್ಲ ಒಗ್ಗಟ್ಟಾಗಿದ್ದೇವೆ: ಸಚಿವ ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
October 9, 2021
in ಕರ್ನಾಟಕ, ರಾಜಕೀಯ
0
ಬೆಂಗಳೂರು ಶಾಸಕರೆಲ್ಲ ಒಗ್ಗಟ್ಟಾಗಿದ್ದೇವೆ: ಸಚಿವ ವಿ.ಸೋಮಣ್ಣ
Share on WhatsAppShare on FacebookShare on Telegram

ಬೆಂಗಳೂರು ನಗರ ಸೇರಿ ವಿವಿಧ ಜಿಲ್ಲೆಗಳ ಉಸ್ತುವಾರಿ ಯಾರಿಗೆ ನೀಡಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ. ಆ ವಿಚಾರದಲ್ಲಿ ನಾನು ಮೂಗು ತೂರಿಸುವುದಿಲ್ಲ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರ ಕುರಿತು ನಿರ್ಧರಿಸಲಿದ್ದಾರೆ ಎಂದು ರಾಜ್ಯದ ವಸತಿ ಮತ್ತು ಮೂಲಸೌಲಭ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.

ADVERTISEMENT

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು. ಇನ್ನು, ಬೆಂಗಳೂರು ನಗರಕ್ಕೆ ಯಾರನ್ನೂ ಉಸ್ತುವಾರಿ ಸಚಿವರನ್ನಾಗಿ ಮಾಡಿಲ್ಲ. ಕೋವಿಡ್ ನಿರ್ವಹಣೆ, ದಸರಾ ಮತ್ತು ಸ್ವಾತಂತ್ರ್ಯೋತ್ಸವ ಸಂಬಂಧ ತಾತ್ಕಾಲಿಕ ನೇಮಕಾತಿ ಮಾಡಲಾಗಿದೆ ಎಂದು ಸೋಮಣ್ಣ ಅವರು ವರದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರು ನನ್ನ ಸ್ನೇಹಿತರು. ಅವರ ಬಳಿ ಇರುವ ಮಾಹಿತಿ ಕುರಿತು ನನಗೆ ತಿಳಿದಿಲ್ಲ. ಐಟಿ ದಾಳಿಯ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಐಟಿಯವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಯಾರ ಹಂಗಿನಲ್ಲೂ ಇಲ್ಲದ ಒಂದು ಸ್ವಾಯತ್ತ ಸಂಸ್ಥೆ. ಸಮರ್ಪಕವಾಗಿ ಮಾಹಿತಿ ಕ್ರೋಡೀಕರಿಸಿ ಅದು ಸೂಕ್ತ ಕ್ರಮ ಕೈಗೊಳ್ಳುತ್ತದೆ. ಇದೊಂದು ಸಹಜವಾದ ಪ್ರಕ್ರಿಯೆ ಎಂದರು.

ಭ್ರಷ್ಟಾಚಾರ ಎಂಬುದು ಒಂದು ದೊಡ್ಡ ಅಂಟುಜಾಡ್ಯ. ಈ ಜಾಡ್ಯಕ್ಕೆ ಯಾರಯಾರು ಪಿತಾಮಹರು ಎಂದು ಕೂಡ ನಿಮಗೂ ತಿಳಿದಿದೆ. ಭ್ರಷ್ಟಾಚಾರ ತಡೆಯಲು ಐಟಿ, ಇಡಿ ಇಲಾಖೆಗಳಿವೆ. ಭ್ರಷ್ಟಾಚಾರ ತಡೆಯಲು ಕೇಂದ್ರದ ಬಿಜೆಪಿ ಸರ್ಕಾರವು ಈ ಇಲಾಖೆಗಳನ್ನು ಚುರುಕುಗೊಳಿಸಿ ಯಾರೇ ಭ್ರಷ್ಟರಿದ್ದರೂ ಅದನ್ನು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿರುವುದು ಮೆಚ್ಚುವಂತಹ ವಿಚಾರ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಂತ ನೀರಲ್ಲ. ಕೇಂದ್ರದ ಆದಾಯ ತೆರಿಗೆ ಇಲಾಖೆ ತನ್ನ ಕರ್ತವ್ಯ ಮಾಡುವಾಗ ಅವನು ಯಾವ ಪಕ್ಷ, ಯಾರ ಜೊತೆ ಇದ್ದ, ಯಾರ ಪಿಎ ಎಂದು ನೋಡುವುದಿಲ್ಲ ಎಂದರು.

ಸಿಂದಗಿಯ ಅಲಮೇಲದಲ್ಲಿ ಉಪ ಚುನಾವಣೆ ಪ್ರಚಾರ ಮಾಡಿದ್ದೇನೆ. ಅಭಿವೃದ್ಧಿ ಪರವಾಗಿ ಮತ್ತು ಬಿಜೆಪಿ ಪರವಾಗಿ ಜನರು ಬೆಂಬಲ ನೀಡಲಿದ್ದಾರೆ. ಹತ್ತಾರು ಸಾವಿರ ಮತಗಳ ಅಂತರದಲ್ಲಿ ನಾವು ಗೆಲ್ಲುತ್ತೇವೆ ಎಂದು ಸಚಿವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರೈತ ಮೋರ್ಚಾ ವತಿಯಿಂದ ಪ್ಲಾಸ್ಟಿಕೇತರ ಬ್ಯಾಗ್ ಬಳಕೆ ಮಾಡುವ ಕಾರ್ಯಕ್ಕೆ ಈ ವೇಳೆ ಚಾಲನೆ ಕೊಡಲಾಯಿತ್ತು.

ಇಲಾಖೆಯ ಯೋಜನೆಗಳು ಮತ್ತು ಕಾರ್ಯಗಳನ್ನು ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಕಾರ್ಯಾಲಯಕ್ಕೆ ಭೇಟಿ ನೀಡುವುದು ಒಂದು ಮಹತ್ವದ ಕ್ರಮ. ಇಲ್ಲಿ ಬಂದಾಗ ಸಾಮಾನ್ಯ ಜನರ ಒಡನಾಟವೂ ಆಗಲಿದೆ ಎಂದು ತಿಳಿಸಿದ್ದಾರೆ.

Tags: BJPCongress PartyCovid 19R AshokSomannaಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜೆಡಿಎಸ್‌ ಅಭ್ಯರ್ಥಿ ಹೈ ಜಾಕ್‌ ಮಾಡುವ ಅವಶ್ಯಕತೆ ನಮಗಿಲ್ಲ, ಅವರೆ ನಮ್ಮ ಪಕ್ಷಕ್ಕೆ ಬಂದರೆ ನಾವು ಬೇಡ ಎನ್ನುವುದಿಲ್ಲ: DKShivakumar

Next Post

ಶ್ರೀರಂಗಪಟ್ಟಣ ದಸರಾ: ಪಟಾಕಿ ಸದ್ದಿಗೆ ಹೆದರಿ ತಿರುಗಿಬಿದ್ದ ಮರದ ಅಂಬಾರಿ ಹೊತ್ತ ಆನೆ Shri Rangapattana

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Restricting salt consumption to protect people's health

ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ಉಪ್ಪು ಬಳಕೆಗೆ ಕಡಿವಾಣ: ಇಂದು ಸಂಜೆಯೇ ಮಾರ್ಗಸೂಚಿ ಪ್ರಕಟ | Salt

September 29, 2026
Next Post
ಶ್ರೀರಂಗಪಟ್ಟಣ ದಸರಾ: ಪಟಾಕಿ ಸದ್ದಿಗೆ ಹೆದರಿ ತಿರುಗಿಬಿದ್ದ ಮರದ ಅಂಬಾರಿ ಹೊತ್ತ ಆನೆ Shri Rangapattana

ಶ್ರೀರಂಗಪಟ್ಟಣ ದಸರಾ: ಪಟಾಕಿ ಸದ್ದಿಗೆ ಹೆದರಿ ತಿರುಗಿಬಿದ್ದ ಮರದ ಅಂಬಾರಿ ಹೊತ್ತ ಆನೆ Shri Rangapattana

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada