ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ (Bengaluru-Mysuru 10 line Expressway) ಮೊದಲ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಲಿದೆ.
ಬೆಂಗಳೂರು- ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಆರಂಭಿಸಲಾಗಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ರಸ್ತೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹ ಆರಂಭವಾಗಿದೆ.
ಟೋಲ್ ದರ ಪಟ್ಟಿ

ಲಘು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 205 ರೂ., ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್’ಗಳ ಏಕಮುಖ ಸಂಚಾರಕ್ಕೆ 220 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 320 ರೂ., ವಾಣಿಜ್ಯ ವಾಹನಗಳ (ಮೂರು ಆಕ್ಸೆಲ್) ಏಕಮುಖ ಸಂಚಾರಕ್ಕೆ 500 ರೂ. ನಿಗದಿ ಮಾಡಲಾಗಿದೆ.
ಮಾರ್ಚ್ 11 ರಂದು ಉದ್ಘಾಟನೆ

ಸುಮಾರು 8 ಸಾವಿರ ಕೋಟಿಯಲ್ಲಿ ಸಿದ್ದವಾದ ರಾಮನಗರ, ಬೆಂಗಳೂರು-ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಇದು ರಾಜ್ಯದ ಮೊದಲ ಎಕ್ಸ್’ಪ್ರೆಸ್ ಹೆದ್ದಾರಿಯಾಗಿದೆ.