• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರನ್ನ ಭೇಟಿಯಾದ ಪವನ್‌ ಕಲ್ಯಾಣ್‌; ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಬೆಂಗಳೂರು: ವಿಧಾನಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರನ್ನ ಭೇಟಿಯಾದ ಪವನ್‌ ಕಲ್ಯಾಣ್‌; ಕಾರಣವೇನು?
Share on WhatsAppShare on FacebookShare on Telegram

ಬೆಂಗಳೂರು: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಭೇಟಿ ವೇಳೆ ಪವನ್ ಕಲ್ಯಾಣ್ ಅವರು ಆಂಧ್ರದಲ್ಲಿ ಕಾಡಾನೆಗಳ ಸೆರೆ, ಆನೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು, ಮಾವುತರಿಗೆ ತರಬೇತಿಯ ಕುರಿತು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ADVERTISEMENT

ನಗರದ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪವನ್ ಕಲ್ಯಾಣ್ ಮಾತುಕತೆ ನಡೆಸಿದರು. ಆ ಬಳಿಕ ವಿಧಾನಸೌಧದಲ್ಲಿ ಅರಣ್ಯ ಸಚಿವರ ಜೊತೆ ಸಭೆ ನಡೆಸಿದರು. ಇದಕ್ಕೂ ಮುನ್ನ ಈಶ್ವರ್ ಖಂಡ್ರೆ ಅವರಿಗೆ ಶಾಲು ಹಾರ ಹಾಕಿ ತಿರುಪತಿ ಲಡ್ಡು ನೀಡಿ ಸನ್ಮಾನಿಸಿ ಗೌರವಿಸಿದರು.ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಆಂಧ್ರ ಮತ್ತು ರಾಜ್ಯದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೇರೆ ರಾಜ್ಯಗಳಿಗೆ ಆನೆಗಳನ್ನು ನೀಡುವುದು ಸಾಮಾನ್ಯ ಪ್ರಕ್ರಿಯೆ. ಆದರೆ ದಸರಾ ಆನೆಗಳನ್ನು ಯಾವುದೇ ರಾಜ್ಯಕ್ಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಆಂಧ್ರದಲ್ಲಿಯೂ ಕಾಡಾನೆಗಳ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಯಶಸ್ಸು, ಕಾಡಾನೆಗಳ ಸೆರೆ ಕಾರ್ಯಾಚರಣೆ, ಆನೆ ಪಳಗಿಸುವುದು ಮತ್ತು ಮಾವುತರ ತರಬೇತಿ ಕುರಿತಂತೆ ಚರ್ಚಿಸಲು ಇಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೊನಿಡಲ ಪವನ್ ಕಲ್ಯಾಣ್ ಅವರು ತಮ್ಮ ರಾಜ್ಯದ ಉನ್ನತ ಅರಣ್ಯಾಧಿಕಾರಿಗಳೊಂದಿಗೆ ಕರ್ನಾಟಕಕ್ಕೆ ಆಗಮಿಸಿದ್ದಾರೆ ಎಂದರು.

ಸುಮಾರು ಒಂದು ಗಂಟೆಗಳ ಕಾಲ ಎರಡೂ ರಾಜ್ಯಗಳ ಅರಣ್ಯಾಧಿಕಾರಿಗಳೊಂದಿಗೆ ಉತ್ತಮ ಮತ್ತು ಉಪಯುಕ್ತ, ಫಲಪ್ರದವಾದ ಚರ್ಚೆ ನಡೆದಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಖಂಡ್ರೆ ತಿಳಿಸಿದರು. ರಾಜ್ಯ ಇದೇ 12ರಂದು ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ನಿರ್ವಹಣೆ ಕುರಿತಂತೆ ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನವನ್ನೇ ಆಯೋಜಿಸಿದೆ. ಈ ಸಮ್ಮೇಳನದಲ್ಲಿ ಉತ್ತಮ ರೂಢಿಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.

ಕರ್ನಾಟಕದಲ್ಲಿ ನಡೆಯುವ ಮೈಸೂರು ದಸರಾ ಮಹೋತ್ಸವದಲ್ಲಿ ಆನೆಗಳೇ ಪ್ರಧಾನ ಆಕರ್ಷಣೆ. ಮೈಸೂರು ದಸರಾದಲ್ಲಿ ವಿಜಯದಶಮಿಯ ದಿನ ನಡೆಯುವ ಜಂಬೂಸವಾರಿ ವಿಶ್ವ ವಿಖ್ಯಾತವಾಗಿದೆ. ಇದಕ್ಕಾಗಿ ಆನೆಗಳನ್ನು ಕಾಡಿನಿಂದ ನಾಡಿಗೆ ತರುವ ಗಜ ಪಯಣ ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಇದೇ ಆಗಸ್ಟ್ 21ರಂದು ವೀರನಹೊಸಹಳ್ಳಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.ಆಂಧ್ರಪ್ರದೇಶವೇ ಇರಲಿ, ಮಹಾರಾಷ್ಟ್ರವೇ ಆಗಿರಲಿ, ಅವರಿಗೆ ನಮ್ಮಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ನಿಮ್ಮ ರಾಜ್ಯದಿಂದ ಪಶುವೈದ್ಯರು, ಮಾವುತರು, ಕಾವಾಡಿಗರು ಮತ್ತು ಅಧಿಕಾರಿಗಳ ತಂಡವನ್ನು ಕಳುಹಿಸಿ ಎಂದು ತಿಳಿಸಲಾಗುತ್ತದೆ.

ಅವರು ಆನೆ ಸೆರೆ ಕಾರ್ಯಾಚರಣೆ ಕಣ್ಣಾರೆ ಕಾಣಲು ಇದರಿಂದ ಸಾಧ್ಯವಾಗುತ್ತದೆ. ಬಳಿಕ ಆನೆಗಳನ್ನು ಹಿಡಿದ ಹೇಗೆ ಪಳಗಿಸಲಾಗುತ್ತದೆ ಎಂಬುದನ್ನೂ ಅವರು ಪ್ರತ್ಯಕ್ಷ ನೋಡುತ್ತಾರೆ. ಹೊರ ರಾಜ್ಯದ ಮಾವುತರಿಗೂ ಆ ಆನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಯುತ್ತದೆ. ಆಗ ಮುಂದಿನ ಕಾರ್ಯಾಚರಣೆಯನ್ನು ಅವರೇ ನಿರ್ವಹಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಇಂದಿನ ಸಭೆಯಲ್ಲಿ ಸಲಹೆ ನೀಡಿದ್ದೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Tags: Congress PartyEnvironment Minister Eshwar KhandreMinister Rahim Khan lpawan kalyan
Previous Post

ಗೊಂಡ ಸಮಾಜದಿಂದ ಆಯ್ಕೆಯಾದ ಕೇಂದ್ರ ಸಚಿವರಿಗೆ, ಸಂಸದರಿಗೆ ದೆಹಲಿಯಲ್ಲಿ ಸನ್ಮಾನ

Next Post

ಸರ್ಕಾರದ ವಿರುದ್ಧ ಬಿರುಗಾಳಿ ನಡುವೆ ಷಾ ಭೇಟಿ ಮಾಡಿದ ಗೌಡರು..

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
Next Post
ಸರ್ಕಾರದ ವಿರುದ್ಧ ಬಿರುಗಾಳಿ ನಡುವೆ ಷಾ ಭೇಟಿ ಮಾಡಿದ ಗೌಡರು..

ಸರ್ಕಾರದ ವಿರುದ್ಧ ಬಿರುಗಾಳಿ ನಡುವೆ ಷಾ ಭೇಟಿ ಮಾಡಿದ ಗೌಡರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada