• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಕಾಲ್ತುಳಿತ ತನಿಖೆ ನಡೆಯುತ್ತಿದೆ ಸತ್ಯಾಸತ್ಯತೆ ಹೊರಬರಲಿದೆ- ಸಚಿವ ಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
June 6, 2025
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರು ಕಾಲ್ತುಳಿತ   ತನಿಖೆ ನಡೆಯುತ್ತಿದೆ ಸತ್ಯಾಸತ್ಯತೆ ಹೊರಬರಲಿದೆ- ಸಚಿವ ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ ವಿಷಯವಲ್ಲ. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಡಿಫೆಂಡ್ ಮಾಡುತ್ತಿಲ್ಲ. ಆರ್ ಸಿಬಿ, ಕೆಎಸ್ ಸಿಎ, ಹಾಗೂ ಬಿಸಿಸಿಐ ಪ್ಲಾನಿಂಗ್ ನಲ್ಲಿ‌ ಲೋಪವಾಗಿದೆ. ಸರ್ಕಾರದ ಲೋಪ ಏನಾದರೂ ಆಗಿದ್ದರೆ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ADVERTISEMENT
Nikhil Kumaraswamy : CMಗಿಂತ ಮೊದಲು ರೀಲ್ಸ್ ಮಿನಿಸ್ಟರ್​ 'DCM DK Shivakumar'ನ ಅಮಾನತು ಮಾಡಿ! #pratidhvani

ಕಲಬುರಗಿ ಯ ಐವಾನ್ ಇ ಶಾಹಿ‌ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್ ಗೆ ನಿರಾಕರಣೆ ಮಾಡಿತ್ತು. ಆದರೆ,‌ಬಿಜೆಪಿಯವರು ಇದಕ್ಕೆ ತಕರಾರು ತೆಗೆದು ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದ್ದಾರೆ. ಈಗ ಘಟನೆ ನಡೆದು‌ ಹೋಗಿದೆ. ಎಲ್ಲದರಲ್ಲೂ ರಾಜಕೀಯ ಮಾಡಬಾರದು, ಇದು ಸಮಯವಲ್ಲ. ಸರ್ಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ. ಸಾವಿಗೀಡಾದವರ ಮನೆಯವರಿಗೆ ಸಾಂತ್ವನ ಹೇಳಿದೆ. ಪರಿಹಾರ ಕೂಡಾ ಘೋಷಿಸಿದೆ. ಘಟನೆ ಕುರಿತಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ. ಪೊಲೀಸ್ ಅಧಿಕಾರಗಳ ಸಸ್ಪೆಂಡ್ ಮಾಡಲಾಗಿದೆ ಎಂದರು.

ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಘಟನೆಗಳಿಗೂ ಒಂದೇ ಮಾನದಂಡ ಅನ್ವಯ ಆಗಬೇಕು. ಪೆಹೆಲ್ಗಾಂ ನಲ್ಲಿ ಉಗ್ರರು ಜನರನ್ನು ಹತ್ಯೆ ಮಾಡಿ ಹೋಗಿದ್ದಾರೆ ಅವರು ಎಲ್ಲಿ ಹೋಗಿದ್ದಾರೆ. ಭಾರತದ ಒಳಗೆ ಇದ್ದಾರ ಅಥವಾ ಪಾಕಿಸ್ತಾನ ಕ್ಕೆ ಹೋಗಿದ್ದಾರ ಎನ್ನುವ ಮಾಹಿತಿ ಇಲ್ಲ. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರ, ವಿದೇಶಾಂಗ ಸಚಿವರ ರಾಜೀನಾಮೆಗೆ ಯಾರಾದರೂ ಒತ್ತಾಯಿಸಿದ್ದಾರೆಯೇ ? ಎಂದು ಪ್ರಶ್ನಿಸಿದರು.

ವಿಧಾನಸೌಧದ ಮುಂದೆ ಸರ್ಕಾರ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಲಿ ಆಟಗಾರರಿಗೆ ಸನ್ಮಾನ ಮಾಡುವುದು ತಪ್ಪಾ?. ಅಂತಹ ಕಾರ್ಯಕ್ರಮ ನಡೆದಾಗ ಯಾರಾದರೂ ಬರುತ್ತಾರೆ ಆಟಗಾರರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ, ಆಟೋಗ್ರಾಫ್, ಫೋಟೋಗ್ರಾಫ್ ಹುಚ್ಚು ಇರುವುದು ಮೋದಿಗೆ ನಮಗಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ಬಿಜೆಪಿಯವರು ರಾಜ್ಯಪಾಲರನ್ನು ಭೇಟಿ ಮಾಡುವುದರಲ್ಲಿ ವಿಶೇಷವೇನಿಲ್ಲ. ಕಲಬುರಗಿಯ ವಿಚಾರದಲ್ಲಿಯೂ ಕೂಡಾ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಬೆಂಗಳೂರು ಕಾಲ್ತುಳಿತ ಘಟನೆಯನ್ನು ರಾಜಕೀಯಗೊಳಿಸುತ್ತಿದ್ದಾರೆ. ಸಿಎಂ ಮಸಾಲೆ ದೋಸೆ ತಿನ್ನಲು ಹೋಗಿದ್ದಾರೆ ಎನ್ನುತ್ತಾರೆ. ಬಿಜೆಪಿಯವರು ಎಲ್ಲದಕ್ಕೂ ಮಸಾಲೆ ಹಾಕುತ್ತಾರೆ. ಅವರಿಗೆ ಪ್ರೌಢಿಮೆ ಇಲ್ಲ ಆದರೆ ನಮಗಿದೆ ಎಂದರು.

Tags: BJPbjp attack congressbjp attacks congressbjp on congressbjp vs congressbjp vs congress karnatakacongresscongress bjp political clashCongress Governmentcongress vs bjp vs jdskarnataka bjp vs congressRCBrcb celebration turns deadlyRCB fansrcb fans deathrcb fans stampedercb stampedercb stampede bengalururcb victory celebrationrcb victory deathsrcb victory paradercb vs pbks
Previous Post

ಮೊದಲು ಡಿಸಿಎಂ, ಗೃಹ ಸಚಿವರ ರಾಜೀನಾಮೆ ಪಡೆಯಿರಿ – ಕಾಲ್ತುಳಿತ ಪ್ರಕರಣದ ಬಗ್ಗೆ ನಿಖಿಲ್ ಆಕ್ರೋಶ ! 

Next Post

ಸಂಭ್ರಮಾಚರಣೆ ವೇಳೆ ಮೃತಪಟ್ಟವರಿಗೆ ಆರ್ಸಿಬಿ, ಕೆಎಸ್ಸಿಎ ಒಂದು ಕೋಟಿ ಪರಿಹಾರ ನೀಡಲಿ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಸಂಭ್ರಮಾಚರಣೆ ವೇಳೆ ಮೃತಪಟ್ಟವರಿಗೆ ಆರ್ಸಿಬಿ, ಕೆಎಸ್ಸಿಎ ಒಂದು ಕೋಟಿ ಪರಿಹಾರ ನೀಡಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada