• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್’ ಪ್ರಶಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
November 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾಚಿರ್ಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ.

ADVERTISEMENT

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ಇವಿ ಚಾಚಿರ್ಂಗ್ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇಶದಲ್ಲೇ ಅತಿಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‍ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್ ಸ್ಟೇಷನ್‍ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್‍ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೆ ಸ್ಥಾನದಲ್ಲಿದೆ. ಉತ್ತರ ಪ್ರದೇಶ-1,989 ಮತ್ತು ದಿಲ್ಲಿ-1,941 ಚಾರ್ಜಿಂಗ್ ಸ್ಟೇಷನ್‍ಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಸರಕಾರ ಅಗತ್ಯ ಮೂಲಸೌಕರ್ಯ ಒದಗಿಸಿದೆ.ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‍ಗಳಿವೆ.ಇದು ರಾಜ್ಯದ ಒಟ್ಟಾರೆ ಇವಿ ಚಾಜಿರ್ಂಗ್ ಸ್ಟೇಷನ್‍ಗಳ ಪೈಕಿ ಶೇ.85ರಷ್ಟು.

LawyerJagadish: ಜಗ್ಗೇಶ್ ಅಕ್ರಮ....ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಲಾಯರ್ ಜಗದೀಶ್..! #jaggesh #guruprasad

ಇವಿ ಚಾಚಿರ್ಂಗ್ ಸ್ಟೇಷನ್‍ಗಳ ಜತೆಗೆ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್ ಸೌಲಭ್ಯ ಒದಗಿಸುವಲ್ಲಿ ‘ಇವಿ ಮಿತ್ರ’ ಆಪ್ ಪಾತ್ರವೂ ದೊಡ್ಡದು. ಆಂಡ್ರಾಯ್ಡ್ ಮತ್ತು ಐಓಎಸ್ ಎರಡು ಮೊಬೈಲ್ ಅಪ್ಲಿಕೇಶನ್‍ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆಪ್-ಬಳಕೆದಾರರ ಪ್ರೊಫೈಲ್ ನಿರ್ವಹಣೆ, ಚಾಚಿರ್ಂಗ್ ಸ್ಟೇಷನ್‍ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾಜಿರ್ಂಗ್ ಪ್ರಕ್ರಿಯೆ, ಬುಕ್ಕಿಂಗ್ ವಿವರ, ಚಾಚಿರ್ಂಗ್ ಸ್ಟೇಷನ್‍ಗಳಲ್ಲಿರುವ ಸೌಕರ್ಯಗಳು ಮತ್ತು ಚಾಜಿರ್ಂಗ್ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಲಭ್ಯವಿದೆ.

ಇವಿ ಸ್ಟೇಷನ್‍ಗಳ ವಿವರ:ರಾಜ್ಯದಲ್ಲಿರುವ ಒಟ್ಟು ಇವಿ ಚಾರ್ಜಿಂಗ್ ಸ್ಟೇಷನ್‍ಗಳು:5765

ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಜಿಂಗ್ ಸ್ಟೇಷನ್‍ಗಳು: 195

ಇತರ ಎಸ್ಕಾಂಗಳು ಸ್ಥಾಪಿಸಿರುವ ಇವಿ ಚಾರ್ಜಿಂಗ್ ಸ್ಟೇಷನ್‍ಗಳು: 70

ಸರಕಾರದ ಇತರ ಇಲಾಖೆಗಳು ಸ್ಥಾಪಿಸುರವ ಚಾರ್ಜಿಂಗ್ ಸ್ಟೇಷನ್‍ಗಳು: 21

ಖಾಸಗಿ ಚಾರ್ಜಿಂಗ್ ಸ್ಟೇಷನ್‍ಗಳು:5,479.

ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರಕಾರದ ಬದ್ಧತೆಗೆ ಸಂದ ಪ್ರಶಸ್ತಿ ಇದು. ಖಾಸಗಿ ಪ್ರಾಬಲ್ಯಕ್ಕೆ ಅವಕಾಶ ಕೊಡೆದೇ, ಇವಿ ಬಳಕೆದಾರರಿಗೆ ಕಡಿಮೆ ವೆಚ್ಚದಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಒದಗಿಸುವಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದು ಹೆಮ್ಮೆಯ ಸಂಗತಿ. ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ 2024ರ ಬಜೆಟ್‍ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾಜಿರ್ಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವ ಇದೆ’

ಕೆ.ಜೆ. ಜಾರ್ಜ್, ಇಂಧನ ಸಚಿವರು:

ರಾಜ್ಯದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್ ಏಜೆನ್ಸಿಯಾಗಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತಕ್ಕೆ ಪ್ರಶಸ್ತಿ ಸಂದಿರುವುದು ಹೆಮ್ಮೆ ಸಂಗತಿ.ಇದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಕರ್ನಾಟಕ ದಿಕ್ಸೂಚಿಯಾಗಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್‍ರ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ’

Tags: BangaloreBesconBeskan was awarded 'Charge India-2024 Excellence'.E-Mobility InstituteEV charging stationsKarnataka
Previous Post

ಭಾರತ -ಕತಾರ್‌ ಗುಪ್ತಚರ ಸಂಸ್ಥೆಗಳ ಎರಡು ದಿನಗಳ ಸಭೆ ;ಸಹಕಾರ ಒಪ್ಪಂದ

Next Post

DeveGowdaಫ್ಯಾಮಿಲಿ ಯಾರ್ ಹೆಸ್ರು ಬಿಡದ Siddaramaiah.. ಇದು ಕುಟುಂಬ ರಾಜಕಾರಣ ಅಲ್ವೋ ಅಂದ್ರು

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post

DeveGowdaಫ್ಯಾಮಿಲಿ ಯಾರ್ ಹೆಸ್ರು ಬಿಡದ Siddaramaiah.. ಇದು ಕುಟುಂಬ ರಾಜಕಾರಣ ಅಲ್ವೋ ಅಂದ್ರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada