• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭಕ್ತಿ, ಜ್ಞಾನ, ಸಂಸ್ಕೃತಿ ಸಂಗಮವೇ ಬಿಜಿಎಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
Share on WhatsAppShare on FacebookShare on Telegram

“ಬಿಜಿಎಸ್ (BGS) ಸಂಸ್ಥೆಯು ಭಕ್ತಿ, ಜ್ಞಾನ, ಸಂಸ್ಕೃತಿಯ ಸಂಗಮವಾಗಿದ್ದು, ಸುಮಾರು 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಪ್ರತಿ ವರ್ಷ ಲಕ್ಷಾಂತರ ಮಕ್ಕಳಿಗೆ ಅಕ್ಷರ ದಾಸೋಹ ಮಾಡಿಕೊಂಡು ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಬೆಂಗಳೂರಿನ ಕೆಂಗೇರಿಯಲ್ಲಿ ಶುಕ್ರವಾರ ನಡೆದ ಬಿಜಿಎಸ್ ಉತ್ಸವದಲ್ಲಿ (BGS Fair) ಶಿವಕುಮಾರ್ (DK Shivakumar) ಅವರು ಮಾತನಾಡಿದರು.

“ಆದಿ ಚುಂಚನಗಿರಿ ಮಠದ ವತಿಯಿಂದ 500 ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲಾಗಿದೆ. ಈ ಸಂಸ್ಥೆಗಳಲ್ಲಿ 1.5 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಉದ್ಯೋಗ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪರ್ಯಾಯವಾಗಿ ನಮ್ಮ ಮಠಮಾನ್ಯಗಳು ರಾಜ್ಯದಲ್ಲಿ ಅಕ್ಷರದಾಸೋಹ ಮಾಡಿಕೊಂಡು ಬಂದಿವೆ. ಇದಕ್ಕಿಂತ ದೊಡ್ಡ ಮಾನವೀಯ ಸೇವೆ ಮತ್ತೊಂದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ ಹೇಳಬಯಸುತ್ತೇನೆ.

ಈ ಕಾರ್ಯಕ್ರಮದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿಗಳನ್ನು (Balagangadharnath Swamiji) ಹಾಗೂ ಅವರ ಮಾರ್ಗದರ್ಶನ ಸ್ಮರಿಸುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ.

ಇದು ನಮ್ಮ ಸಂಸ್ಕೃತಿ, ಇದೇ ನಮ್ಮ ದೇಶದ ಆಸ್ತಿ. ಇಂದು ಬಾಲಗಂಗಾಧರನಾಥ ಸ್ವಾಮೀಜಿಗಳ ಜಯಂತಿಯಂದು ನಿಮ್ಮೆಲ್ಲರ ಪರವಾಗಿ ನಾನು ದೀಪ ಬೆಳಗಿಸಿದ್ದೇನೆ. ಶುಭಂ ಕರೋತಿ ಕಲ್ಯಾಣಂ, ಆರೋಗ್ಯ ಧನ ಸಂಪದಂ, ಜ್ಞಾನಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಆರೋಗ್ಯ, ಐಶ್ವರ್ಯ, ಸಂಪತ್ತು, ವಿದ್ಯೆ ಎಲ್ಲವೂ ಸಿಗಲಿ ಎಂದು ಆಶಿಸುತ್ತೇನೆ.

ಶಿಕ್ಷಣ ಸಂಸ್ಥೆ ಕಾರ್ಯಕ್ರಮದಲ್ಲಿ ನಾವು ಸೇರಿದ್ದು, ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ನಾನು ಕೆಲ ಕಾಲ ಕಾರ್ಯಕ್ರಮ ನೋಡಿ ಸಂತೋಷವಾಯಿತು. ಬಿಜಿಎಸ್ (BGS) ಎಂದರೆ ಕೇವಲ ವಿದ್ಯಾ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಸಾಹಿತ್ಯ, ಕಲೆ ಕ್ಷೇತ್ರಕ್ಕೆ ಆದ್ಯತೆ ನೀಡಿ ಗ್ರಾಮೀಣ ಕಲೆಗಳನ್ನು ಉಳಿಸಿ, ಬೆಳೆಸಲು ಸಹಕಾರ ನೀಡುತ್ತಿದೆ.

ನಾನು 2008ರಲ್ಲಿ ರಾಜ್ಯಶಾಸ್ತ್ರ ಪದವಿ ವ್ಯಾಸಂಗ ಮಾಡಿದೆ. ಇತಿಹಾಸ ಓದುವಾಗ ಅಲೆಕ್ಸಾಡಂರ್ ಭಾರತ ವಶಪಡಿಸಿಕೊಳ್ಳಲು ಹೂರಟಾಗ ತನ್ನ ಗುರು ಅರಿಸ್ಟಾಟಲ್ (Guru Harispatal) ಅವರನ್ನು ಭೇಟಿ ಮಾಡುತ್ತಾನೆ. ಆಗ ಅರಿಸ್ಟಾಟಲ್ ಅಲೆಕ್ಸಾಂಡರ್ ಗೆ ಒಂದು ಮಾತು ಹೇಳುತ್ತಾರೆ. ಭಾರತದಿಂದ ಮರಳಿ ಬರುವಾಗ ಐದು ವಸ್ತು ತೆಗೆದುಕೊಂಡು ಬಾ. ರಾಮಾಯಣ(Ramayana), ಮಹಾಭಾರತ ಗ್ರಂಥ(Mahabharatha Grantha) , ಗಂಗಾಜಲ, ಕೃಷ್ಣನ ಕೊಳಲು, ಬಾಲಗಂಗಾಧರನಾಥ ಸ್ವಾಮೀಜಿಯಂತಹ ತತ್ವಜ್ಞಾನಿ ಕರೆದುಕೊಂಡು ಬಾ. ಈ ಐದು ವಸ್ತುಗಳನ್ನು ಗೆದ್ದರೆ ಭಾರತವನ್ನೇ ಗೆದ್ದಂತೆ. ನಮ್ಮ ಸಂಸ್ಕೃತಿ ನಮ್ಮ ಮಠ ಮಾನ್ಯಗಳು.

25 ವರ್ಷಗಳ ಹಿಂದೆ ನಾನು ಸಹಕಾರ ಮಂತ್ರಿಯಾಗಿದ್ದಾಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ಯಾರೀಸ್ (Paris) ದೇಶಕ್ಕೆ ಭೇಟಿ ನೀಡಿದ್ದೆ. ಆ ಕಾರ್ಯಕ್ರಮದ ದಿನ ನನ್ನ ಜನ್ಮದಿನವಾಗಿತ್ತು. ಅಂದು ವೇದಿಕೆ ಮೇಲೆ ಕರೆದು ನನ್ನ ಪರಿಚಯಿಸಿ ಕೇಕ್ ಕತ್ತರಿಸಲು ಹೇಳಿದರು. ಆ ಸಂದರ್ಭದಲ್ಲಿ ಮೇಣದ ದೀಪ ಆರಿಸಲು ಹೇಳಿದರು. ಆಗ ವ್ಯಕ್ತಿಯೊಬ್ಬ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರು ಭಾರತೀಯರು ಅವರದ್ದು ದೀಪ ಹಚ್ಚುವ ಸಂಸ್ಕೃತಿಯೇ ಹೊರತು, ದೀಪ ಆರಿಸುವ ಸಂಸ್ಕೃತಿಯಲ್ಲ ಎಂದು ಹೇಳಿದರು.

ನೀವು ನಿಮ್ಮ ಮೂಲ ಮರೆಯಬಾರದು. ಪೋಷಕರು, ಶಾಲೆ, ಶಿಕ್ಷಕರೇ ನಿಮ್ಮ ಮೂಲ. ಅವರನ್ನು ಎಂದಿಗೂ ಮರೆಯಬಾರದು. ನಾವು ನಮ್ಮ ಮನೆಗಳನ್ನು ರಕ್ಷಿಸಿಕೊಂಡಂತೆ, ಮಠವನ್ನು ರಕ್ಷಣೆ ಮಾಡಿಕೊಳ್ಳಬೇಕು. ಬಿಜಿಎಸ್ ಸಂಸ್ಥೆ ಆಲದಮರದಂತೆ, ನಿರಂತರವಾಗಿ ಬೆಳೆದು ಜನರಿಗೆ ನೆರಳಾಗಿ ನಿಲ್ಲುತ್ತದೆ. ಬಾಲಗಂಗಾಧರನಾಥ ಸ್ವಾಮೀಜಿಗಳು ಹಾಕಿಕೊಟ್ಟಿರುವ ಅಡಿಪಾಯ ಮಹತ್ವದ್ದಾಗಿದ್ದು, ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರೆ ಸ್ವಾಮೀಜಿಗಳು ಬಹಳ ಆಸ್ಥೆಯಿಂದ ಬೆಳೆಸಿಕೊಂಡು ಹೋಗುತ್ತಿದ್ದಾರೆ.

ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಶಿಕ್ಷಣ ನೀಡಿ ಮಾರ್ಗದರ್ಶನ ನೀಡುತ್ತಿರುವ ಈ ಸಂಸ್ಥೆ ಕೊಡುಗೆ ಅನನ್ಯ.

ಎಸ್.ಎಂ ಕೃಷ್ಣ (SM Krishna) ಅವರ ಕಾಲದಲ್ಲಿ ಮಠದ ವತಿಯಿಂದ ಪರಿಸರ ಉಳಿಸಲು 5 ಕೋಟಿ ಗಿಡ ನೆಡುವ ಕಾರ್ಯಕ್ರಮ ಮಾಡಲಾಗಿತ್ತು. ನೀವುಗಳು ಕೂಡ 10 ಗಿಡಗಳನ್ನು ನೆಟ್ಟು ಪರಿಸರ ಉಳಿಸುವ ಕಾರ್ಯ ಮಾಡಬೇಕು. ಪರೋಪಕಾರಾರ್ಥ ವಹಂತಿ ವದ್ಯಃ | ಪರೋಪಕಾರಾರ್ಥ ದುಹಂತಿ ಗಾವಃ || ಪರೋಪಕಾರಾರ್ಥ ಫಲಂತಿ ವೃಕ್ಷಾಃ | ಪರೋಪಕಾರಾರ್ಥಮಿದಂ ಶರೀರಂ||” ಅಂದರೆ ನದಿ ಹರಿಯುವುದು, ಹಸು ಹಾಲು ನೀಡುವುದು, ಮರ ಹಣ್ಣು ನೀಡುವುದು ಬೇರೆಯವರಿಗಾಗಿ. ಅದೇ ರೀತಿ ನಮ್ಮ ಜೀವನವು ಬೇರೆಯವರ ಸಹಾಯಕ್ಕೆ ಮೀಸಲಿಡಬೇಕು.

ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಕಲ್ಲನ್ನು ಚಪ್ಪಡಿಯಾಗಿ, ಜಲ್ಲಿಯಾಗಿ, ಕಂಬವಾಗಿ, ವಿಗ್ರಹವಾಗಿ ಬಳಸಬಹುದು. ನೀವು ಕೂಡ ನಿಮ್ಮ ಜೀವನದಲ್ಲಿ ಬೇರೆ ಬೇರೆ ರೀತಿಯಲ್ಲಿ ಸಮಾಜಕ್ಕೆ ನೆರವಾಗಬೇಕು. ಈ ಸಂಸ್ಥೆಯಲ್ಲಿ ಓದಿರುವವರೆಲ್ಲರೂ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿಕೊಳ್ಳಬೇಕು. ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ದಾನ ಮಾಡಬೇಕು.”

Tags: Balagangadharanath SwamijiBGSBGS CollegeBGS SchoolsBJPCongress PartyDK Shivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಸಚಿವರು

Next Post

ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post

ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada