Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿಕೆಶಿ, ಕೆಜೆ ಜಾರ್ಜ್

ಪ್ರತಿಧ್ವನಿ

ಪ್ರತಿಧ್ವನಿ

January 30, 2023
Share on FacebookShare on Twitter

ಶ್ರೀನಗರ: ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ ಜೋಡೋ ಯಾತ್ರೆ ಸೋಮವಾರ ಸಂಪೂರ್ಣವಾಗುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3570 ಕಿ.ಮೀ. ಸಾಗಿದ ಈ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ. ಹೊಸ ಮೈಲುಗಲ್ಲು ಸೃಷ್ಟಿಸಿದೆ.

ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ, ಷಡ್ಯಂತ್ರ, ಅಪಪ್ರಚಾರ ಸೇರಿದಂತೆ ಎಲ್ಲ ಅಡೆತಡೆಗಳನ್ನು ಮೀರಿ ಯಾತ್ರೆ ತನ್ನ ಗುರಿ ತಲುಪಿದೆ. ಇದು ಕಾಂಗ್ರೆಸ್ ಹಾಗೂ ಪಕ್ಷದ ನಾಯಕರಿಗೆ ದೇಶದ ಬಗ್ಗೆ ಇರುವ ಕಾಳಜಿ, ಬದ್ಧತೆಗೆ ಸಾಕ್ಷಿ.

ಇಂದು ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‌ಮಾಜಿ ಸಚಿವ ಕೆಜೆ ಜಾರ್ಜ್ ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ.

ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

‘ಭಾರತ ಜೋಡೋ ಯಾತ್ರೆ ಅಂತಿಮ ದಿನ ನಾವೆಲ್ಲ ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದೇವೆ. ದೇಶವನ್ನು ಒಗ್ಗೂಡಿಸಿ, ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರು ಈ ಯಾತ್ರೆ ಆರಂಭಿಸಿದ್ದು, ಇಂದು ಯಾತ್ರೆಯ ಅಂತಿಮ ದಿನವಾಗಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಸುಮಾರು 100 ಸಂಸದರು, ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ.

ಯಾತ್ರೆ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದ್ದು, ಇಡೀ ಪ್ರದೇಶ ಹಿಮದಿಂದ ತುಂಬಿದೆ. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ.

ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ. ಅವರಿಗೆ ಧನ್ಯವಾದಗಳು’ ಎಂದು ಶಿವಕುಮಾರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

DBOSS FANS | ವಿನೋದ್ ಪ್ರಭಾಕರ್ ಖಡಕ್ ಡೈಲಾಗ್ ಗೆ ಶಿಳ್ಳೆ, ಕೇಕೆ ಹಾಕಿದ ಅಭಿಮಾನಿಗಳು | VINOD PRABHAKAR
ಇದೀಗ

DBOSS FANS | ವಿನೋದ್ ಪ್ರಭಾಕರ್ ಖಡಕ್ ಡೈಲಾಗ್ ಗೆ ಶಿಳ್ಳೆ, ಕೇಕೆ ಹಾಕಿದ ಅಭಿಮಾನಿಗಳು | VINOD PRABHAKAR

by ಪ್ರತಿಧ್ವನಿ
March 20, 2023
ದಕ್ಷಿಣ ಕನ್ನಡ ಜಿಲ್ಲೆಯ ಮೂರು  ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!
ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!

by ಮಂಜುನಾಥ ಬಿ
March 25, 2023
KS ESHWARAPPA | ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರು ಕಾಂಗ್ರೆಸ್ ಅವ್ರೆ ಸೋಲಿಸುತಾರೆ #PRATIDHVANI
ಇದೀಗ

KS ESHWARAPPA | ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರು ಕಾಂಗ್ರೆಸ್ ಅವ್ರೆ ಸೋಲಿಸುತಾರೆ #PRATIDHVANI

by ಪ್ರತಿಧ್ವನಿ
March 23, 2023
ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI
ಕರ್ನಾಟಕ

ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI

by ಪ್ರತಿಧ್ವನಿ
March 25, 2023
42 ದಿನದ ಜನಜಾತ ಶಿಶುವನ್ನ ಕಳವುಮಾಡಿ ಸಿಕ್ಕಿಬಿದ್ದ ಕಳ್ಳಿ..!
Top Story

42 ದಿನದ ಜನಜಾತ ಶಿಶುವನ್ನ ಕಳವುಮಾಡಿ ಸಿಕ್ಕಿಬಿದ್ದ ಕಳ್ಳಿ..!

by ಪ್ರತಿಧ್ವನಿ
March 25, 2023
Next Post
DR Vishnuvardhan | Mysore | ಇಡೀ ಕರ್ನಾಟಕಕ್ಕೆ ಇದು ಒಂದು ಮಾದರಿ ಸ್ಮಾರಕ ಆಗಿದೆ!

DR Vishnuvardhan | Mysore | ಇಡೀ ಕರ್ನಾಟಕಕ್ಕೆ ಇದು ಒಂದು ಮಾದರಿ ಸ್ಮಾರಕ ಆಗಿದೆ!

ಡಿಕೆಶಿ ನನ್ನ ಜೀವನ ಹಾಳು ಮಾಡಿದ್ದಾನೆ

ಡಿಕೆಶಿ ನನ್ನ ಜೀವನ ಹಾಳು ಮಾಡಿದ್ದಾನೆ

ಯಡಿಯೂರಪ್ಪ ಯಾರು ನನ್ನ ಬಗ್ಗೆ ಮಾತಾಡೋಕೆ : Siddaramaiah | Yediurappa

ಯಡಿಯೂರಪ್ಪ ಯಾರು ನನ್ನ ಬಗ್ಗೆ ಮಾತಾಡೋಕೆ : Siddaramaiah | Yediurappa

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist