ಲೂಧಿಯಾನ:ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಇಂದು ಬೆಳಗ್ಗೆ ಪಂಜಾಬ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಸಂತೋಖ್ ಸಿಂಗ್ ಚೌಧರಿ ಫಿಲ್ಲೌರ್‌ನಲ್ಲಿ ಪಾದಯಾತ್ರೆಯ ವೇಳೆ ಕುಸಿದುಬಿದ್ದರು. ಕೂಡಲೇ ಅವರನ್ನು ಫಗ್ವಾರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಧಾವಿಸಿದರು, ಅಲ್ಲಿ ಹಿರಿಯ ಕಾಂಗ್ರೆಸ್ ನಾಯಕನನ್ನು ಕರೆದೊಯ್ಯಲಾಯಿತು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.