ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಯಶಸ್ವಿಯಾಗಿ 100 ದಿನಗಳ್ನು ಪೂರೈಸಿದ್ದು ಯಾತ್ರೆಯೂ ರಾಜಸ್ಥಾನವನ್ನ ಮುಗಿಸಿ ಇದೀಗ ಉತ್ತರಪ್ರದೇಶ, ದೆಹಲಿ, ಹರಿಯಾಣ ಪಂಜಾಬ್ ಮೂಲಕ ಜಮ್ಮುವಿನಲ್ಲಿ ಅಂತ್ಯವಾಗಲಿದೆ.
ಇನ್ನು ಯಾತ್ರೆಯೂ 100 ದಿನಗಳನ್ನ ಪೂರೈಸಿರುವ ಹಿನ್ನಲೆಯಲ್ಲಿ ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಯಾತ್ರೆಯನ್ನ ಕೂಡಿಕೊಂಡಿದ್ದಾರೆ. ಸಿಎಂ ಸುಖ್ವಿಂದರ್ ಜೊತೆ ಜೊತೆಗೆ ಉಪಮುಖ್ಯಮಂತ್ರಿ ಮನೀಸ್ ಚೌಧರಿ, ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪ್ರತಿಭಾ ಸಿಂಗ್, ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
ಯಾತ್ರೆಯುದ್ದಕ್ಕೂ ರಾಹುಲ್ ಗಾಂಧಿ ಸಾಮಾನ್ಯ ಜನರ ಸಮಸ್ಯೆಗಳತ್ತ ಚಿತ್ತ ಹರಿಸಿದ್ದು ಭಾರತ್ ಜೋಡೋ ಪಾದಯಾತ್ರೆಯ ಯಶಸ್ಸು ಮತ್ತು ಬಿಜೆಪಿ ನಾಯಕರು ಮಾಡಿದ ಕುತಂತ್ರವನ್ನೆಲ್ಲಾ ನಾವು ನಾಶ ಮಾಡಿದ್ದೇವೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಮುಂದಿನ ಜನವರಿ 26ರಿಂದ ನಾವು ಫಾಲೋ ಅಪ್ ಅಭಿಯಾನವನ್ನ ನಡೆಸಲಿದ್ದು ದೇಶದ ಜನತೆಗೆ ಭಾರತ್ ಜೋಡೋ ಯಾತ್ರೆಯ ಉದ್ಧೇಶ ಹಾಗೂ ಸಂದೇಶವನ್ನ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಯಾತ್ರೆ 100 ದಿನ ಪೂರೈಸಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಕೇಮದ್ರ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷಗಳ ವಿರುದ್ದ ಹರಿಹಾಯ್ದಿದ್ದಾರೆ ಮತ್ತು ಶೀಘ್ರದಲ್ಲಿ ರಾಜಸ್ಥಾನ ಕಾಂಗ್ರೆಸ್ ಏರ್ಪಟ್ಟಿರುವ ಬಿಕ್ಕಟ್ಟು ಶಮನವಾಗುವ ಮುನ್ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾದ ಪಾದಯಾತ್ರೆಯೂ ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮುಗಿಸಿ ಇದೀಗ ರಾಜಸ್ಥಾನ ಉತ್ತರಪ್ರದೇಶ, ದೆಹಲಿ, ಹರಿಯಾಣ ಪಂಜಾಬ್ ಮೂಲಕ ಜಮ್ಮು-ಕಾಶ್ಮೀರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.