ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ( Prajwal Revanna ) ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನ ಆರೋಪಿ ಆಗಿರುವ ಭವಾನಿ ರೇವಣ್ಣ ( Bhavani Revanna ) ಅವರ ಜಾಮೀನು ಷರತ್ತು ಸಡಿಲಿಕೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ..

ಹಾಸನ, ಮೈಸೂರು ಜಿಲ್ಲೆಗಳಿಗೆ ಪ್ರವೇಶಿಸದಂತೆ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಆದೇಶದಲ್ಲಿ ಷರತ್ತು ವಿಧಿಸಲಾಗಿತ್ತು. ಇಂದು ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಆದೇಶದಲ್ಲಿ ವಿಧಿಸಲಾದ ಷರತ್ತನ್ನು ಸಡಿಲಿಸುವ ಅರ್ಜಿ ವಿಚಾರಣೆ ನಡೆಯುತ್ತಿದೆ. ಭವಾನಿ ರೇವಣ್ಣ ಪರ ವಕೀಲ ಸಂದೇಶ ಚೌಟ ವಾದ ಮಂಡನೆ ಮಾಡುತ್ತಿದ್ದಾರೆ..

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನ ಆರೋಪಿ ಆಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತಿನಲ್ಲಿನ ಸಡಿಲಿಕೆ ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು.

ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ. ರೇವಣ್ಣ ಅವರ ಪತ್ನಿಯಾಗಿರುವ ಭವಾನಿ ರೇವಣ್ಣ ತಮಗೆ ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿರುವುದರಲ್ಲಿ ವಿನಾಯಿತಿ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ನಡೆಸಿತ್ತು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ಸಮ್ಮತಿ ನೀಡಿದ ಪೀಠ ವಿಚಾರಣೆಯನ್ನು ಮುಂದೂಡಿತು.
ವಿಚಾರಣೆ ವೇಳೆ, ಭವಾನಿ ಪರ ವಕೀಲರು, ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ಈ ನ್ಯಾಯಾಲಯವು ವಿಧಿಸಿರುವ ಷರತ್ತಿನಿಂದಾಗಿ ಭವಾನಿ ಅವರು ಮಂಡ್ಯ ಅಥವಾ ಮೈಸೂರಿಗೆ ಪ್ರಯಾಣಿಸಲಾಗುತ್ತಿಲ್ಲ. ತುರ್ತು ಪರಿಸ್ಥಿತಿ ಇರುವುದರಿಂದ ಅರ್ಜಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನು ಆಲಿಸಿದ ಪೀಠವು, ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ, ಮಾರ್ಚ್ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದ ವಿಚಾರಣೆ ಇಂದು ನಡೆಯುತ್ತಿದೆ