![](https://pratidhvani.com/wp-content/uploads/2024/05/bhavani-revanna-hd-revanna-1024x576.webp)
ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ.ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ಕೊನೆಗೂ SIT ವಿಚಾರಣೆಗೆ ಹಾಜರಾಗುವ ಮಾತನಾಡಿದ್ದಾರೆ. ವಿದೇಶದಿಂದಲೇ ವಿಡಿಯೋ ರಿಲೀಸ್ ಮಾಡಿರೋ ಪ್ರಜ್ವಲ್ ರೇವಣ್ಣ ಇದೇ ಮೇ 31ರಂದು ವಾಪಸ್ ಬಂದು ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗುತ್ತಿದ್ದಂತೆ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.ಕೆ.ಆರ್ ನಗರ ಮೂಲದ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿತ್ತು. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು.
ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿರುವುದರಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಗಿರೀಶ್ಕುಮಾರ್ ಅವರ ಮೂಲಕ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ CRPC 438 ಅಡಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.