
ಶುಭ ಶುಕ್ರವಾರ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಶುಭಸುದ್ದಿ ಸಿಕ್ಕಿದೆ. ಕೆ.ಆರ್.ನಗರದಲ್ಲಿ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ
ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ದೊರೆತಿದೆ. ಕಿಡ್ನ್ಯಾಪ್ ಕೇಸ್ನಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದ್ದು , ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ನಿಟ್ಟುಸಿರು ಬಿಡುವಂತಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ದೊರೆತಿದೆ. ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಕೋರ್ಟ್ ಸೂಚನೆ ಕೊಟ್ಟಿದೆ. ಹಾಸನ ಹಾಗೂ ಕೆಆರ್ ನಗರಕ್ಕೆ ಪ್ರವೇಶಿಸಬಾರದು ಅಂತ ಕೋರ್ಟ್ ಕಟ್ಟಪ್ಪಣೆ ನೀಡಿದೆ.