ಭೀಮ ಸಿನಿಮಾ ಸೆಟ್ಟೇರಿದಾನಿಂದ್ಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟು ಹಾಕಿರೋ ಸಿನಿಮಾ, ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಭೀಮಾ ಕೂಡ ಒಂದು, ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್ ಸಿನಿಮಾ ಇದಾಗಿದ್ದು, ಸಲಗದಂತಹ ಬ್ಲಾಕ್ ಬಸ್ಟರ್ ಕೊಟ್ಮೇಲೆ ದುನಿಯಾ ವಿಜಯ್ ಮತ್ತೆ ಆಕ್ಷನ್ ಕಟ್ ಹೇಳೋದ್ರೊಂದಿಗೆ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ.
ಇನ್ನು ದುನಿಯಾ ವಿಜಯ್ ಲೀಡ್ ರೋಲ್ ಪ್ಲೇ ಮಾಡಿರೋ ಈ ಸಿನಿಮಾ, ಪ್ರಚಂಡ ಪ್ರತಿಭಾವಂತರ ದಂಡುಕಟ್ಟಿಕೊಂಡು ವಿಜಯ್ ಈ ಸಲ ಮತ್ತೊಂದು ಔಟ್ ಅಂಡ್ ಔಟ್ ಎಂಟ್ರಟೈನ್ಮೆಂಟ್ ಪ್ಯಾಕೇಜ್ ಸಿನಿಮಾವನ್ನ ನಿರ್ಮಾಣ ಮಾಡಿದ್ದಾರೆ.ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಜಂಟಿಯಾಗಿ ನಿರ್ಮಿಸಿರೋ ಈ ಚಿತ್ರಕ್ಕೆ ಶಿವಸೇನಾ ಕ್ಯಾಮೆರಾ ವರ್ಕ್ ಇದೆ, ಭೀಮ ಈಗಾಗ್ಲೇ ಪೋಸ್ಟ್ ಪ್ರೊಡಕ್ಷನ್‌ಗೆ ಹೋಗಿದ್ದು, ಕೊನೆಯ ಹಂತದಲ್ಲಿ ಚಿತ್ರತಂಡ ಇದೆ,

ಇದೀಗ ಒಂದೊಂದೇ ಹಾಡನ್ನ ರಿಲೀಸ್ ಮಾಡೋದಕ್ಕೆ ಸಜ್ಜಾಗಿರುವು ಭೀಮಾ ಚಿತ್ರತಂಡ ಅದ್ರಂತೆ, ಮೊದಲ ಹಾಡನ್ನ ಇದೇ 18ನೇ ತಾರೀಖು ಸೋಮವಾರ ಗೌರಿ ಗಣೇಶ ಹಬ್ಬದ ಪ್ರಯುಕ್ತ ರಿಲೀಸ್ ಮಾಟ್ತಾ ಇದ್ದಾರೆ, ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ ಜೊತೆಗೆ ವಿಜಯ್ ಸಲಗಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ರು. ಆದಾದ ಮೇಲೆ ಭೀಮ ಮೂಲಕ ಮತ್ತೆ ಸಂಚಲನ ಸೃಷ್ಟಿಸೋದಕ್ಕೆ ಸಜ್ಜಾಗಿದ್ದಾರೆ. ಈಗಾಗ್ಲೇ ರಿಲೀಸ್ ಆಗಿರೋ ಟೀಸರ್ ಬಿಟ್‌ನಲ್ಲೇ ವಿಜಯ್ ಚರಣ್ ಮ್ಯೂಸಿಕ್ ಝಲಕ್ ನ ಬಿಟ್ಟು ಕುತೂಹಲ ಹುಟ್ಟಿಸಿದ್ರು.. ಹಾಗಾಗಿ ಈಗ ಗೌರಿ ಗಣೇಶನ ಹಬ್ಬಕ್ಕೆ ರಿಲೀಸ್ ಆಗ್ತಿರೋ ಬ್ಯಾಡ್ ಬಾಯ್ಸ್ ಮೇಲೆ ಸಿಕ್ಕಾಪಟ್ಟೆ ಕುತೂಹಲ ನಿರೀಕ್ಷೆ ಇದೆ. ಖಂಡಿತ ಟ್ರೆಂಡಾಗೋದನ್ನ ಏನೋ ಮಾಡಿರೋ ಸೂಚನೆ ಈಗ ರಿಲೀಸ್ ಆಗಿರೋ ಪೋಸ್ಟರ್ ಹೇಳ್ತಿದೆ.