• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
January 17, 2026
in ಇದೀಗ, ಕರ್ನಾಟಕ, ರಾಜಕೀಯ
0
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
Share on WhatsAppShare on FacebookShare on Telegram

ಬೆಂಗಳೂರು: ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ(Eshwara Khandre)ಯವರ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ((Bheemanna Khandre) ಅವರು ವಯೋಸಹಜ ಅನಾರೋಗ್ಯದಿಂದ ಬೀದರ್​​ನ ನಿನ್ನೆ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ,

ADVERTISEMENT

ಮಾಜಿ ಸಚಿವ, ಲಿಂಗಾಯತ ಸಮಾಜದ ನಾಯಕರಾಗಿದ್ದ ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.

Siddaramaiah : ಕರ್ನಾಟಕದಲ್ಲಿ ಕನ್ನಡನೇ ಮಾತಾಡ್ಬೇಕು #pratidhvani #siddaramaiah #vidhanasoudha #bengaluru

ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ನೆನೆದಿದ್ದಾರೆ.

 

Bheemanna Khandre: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ, ಇಂದು ಅಂತ್ಯಕ್ರಿಯೆ

ಇನ್ನು ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

RB Timmapur: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತೀವ್ರ ವಾಗ್ದಾಳಿ #pratidhvani

ಹಿರಿಯ ರಾಜಕಾರಣಿ ಶತಾಯುಷಿ ಭೀಮಣ್ಣ ಖಂಡ್ರೆ ವಯೋಸಹಜ ಅನಾರೋಗ್ಯದಿಂದ ಬೀದರ್‌ನಲ್ಲಿ ಶುಕ್ರವಾರ ರಾತ್ರಿ ನಿಧನರಾಗಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾಗಿದ್ದ ಖಂಡ್ರೆ, ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಭೀಮಣ್ಣ ಖಂಡ್ರೆಗೆ ಪುತ್ರ, ಸಚಿವ ಈಶ್ವರ್ ಖಂಡ್ರೆ, ಮೊಮ್ಮಗ ಸಂಸದ ಸಾಗರ್ ಖಂಡ್ರೆ ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದೇ ಭಾಲ್ಕಿಯಲ್ಲಿ ನಡೆಯಲಿದೆ.

 

Previous Post

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

Next Post

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
Next Post
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada