• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಚ್ಚುವ ಹಂತಕ್ಕೆ ಬಂದ ಬೀದರ್‌ ವಿಮಾನ ನಿಲ್ದಾಣ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ಕರ್ನಾಟಕ
0
ಮುಚ್ಚುವ ಹಂತಕ್ಕೆ ಬಂದ ಬೀದರ್‌ ವಿಮಾನ ನಿಲ್ದಾಣ
Share on WhatsAppShare on FacebookShare on Telegram

ಬೀದರ್‌: ನಾಗರಿಕ ವಿಮಾನ ಸಂಚಾರ ಸ್ಥಗಿತಗೊಂಡ ಬೆನ್ನಲ್ಲೇ ಭದ್ರತಾ ಸಿಬ್ಬಂದಿಯನ್ನು ಬೇರೆಡೆ ನಿಯೋಜಿಸಲು ನಿರ್ಧರಿಸಿರುವುದರಿಂದ ಬೀದರ್‌ ವಿಮಾನ ನಿಲ್ದಾಣ ಮುಚ್ಚುವ ಹಂತಕ್ಕೆ ಬಂದಿದೆ.ಬೀದರ್‌ ವಿಮಾನ ನಿಲ್ದಾಣದ ಭದ್ರತೆಗೆ ಕರ್ನಾಟಕ ರಾಜ್ಯ ಕೈಗಾರಿಕೆ ಭದ್ರತಾ ಪಡೆಯ (ಕೆಎಸ್‌ಐಎಸ್‌ಎಫ್‌) ಅಧಿಕಾರಿ, ಸಿಬ್ಬಂದಿ ಸೇರಿದಂತೆ ಒಟ್ಟು 45 ಜನರನ್ನು ನಿಯೋಜಿಸಲಾಗಿತ್ತು.ವಿಮಾನ ಹಾರಾಟ ಸ್ಥಗಿತಗೊಂಡ ನಂತರ ಅವರನ್ನು ತಾತ್ಕಾಲಿಕವಾಗಿ ಡಿಎಆರ್‌ನಲ್ಲಿ ಬಳಸಿಕೊಳ್ಳಲಾಗುತ್ತಿತ್ತು.

ADVERTISEMENT

ಈಗ ವಿಜಯಪುರದ ನೂತನ ವಿಮಾನ ನಿಲ್ದಾಣ ಆರಂಭಿಸಲು ನಿರ್ಧರಿಸಲಾಗಿದ್ದು, ಅಲ್ಲಿನ ಭದ್ರತೆಗಾಗಿ ಇಲ್ಲಿನ 40 ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ಕುರಿತ ಪತ್ರ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.ಪ್ರಯಾಣಿಕರ ಬೇಡಿಕೆಯ ಸಮಯಕ್ಕೆ ತಕ್ಕಂತೆ ವಿಮಾನ ಸಂಚರಿಸದ ಕಾರಣ ಕಂಪನಿಯ ಆದಾಯದಲ್ಲಿ ನಷ್ಟ ಉಂಟಾಗಿ ‘ಸ್ಟಾರ್‌ ಏರ್‌’, ಒಪ್ಪಂದದ ಅವಧಿ ಪೂರ್ಣಗೊಳ್ಳುವುದಕ್ಕೂ ಮುನ್ನವೇ 2023ರ ಡಿಸೆಂಬರ್‌ 26ರಂದು ವಿಮಾನ ಸಂಚಾರ ಸ್ಥಗಿತಗೊಳಿಸಿತ್ತು.

ಎಂಟು ತಿಂಗಳಾಗುತ್ತ ಬಂದರೂ ಈ ನಿಟ್ಟಿನಲ್ಲಿ ಯಾವುದೇ ಬೆಳವಣಿಗೆ ಆಗಿರಲಿಲ್ಲ.ಕೆಲ ದಿನಗಳ ಹಿಂದೆ ಸಂಸದ ಸಾಗರ ಖಂಡ್ರೆ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್‌ ನಾಯ್ಡು ಅವರನ್ನು ಭೇಟಿ ಮಾಡಿ ಹೊಸದಾಗಿ ವಿಮಾನ ಹಾರಾಟ ಪ್ರಾರಂಭಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರೂ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಸಾಧಕ-ಬಾಧಕ ಕುರಿತು ಸಭೆ ನಡೆಸಿ, ವಿಮಾನ ಹಾರಾಟ ಪುನರಾರಂಭಿಸುವ ಆಶಯ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಭದ್ರತಾ ಸಿಬ್ಬಂದಿಯನ್ನು ಸ್ಥಳಾಂತರಿಸುವ ನಿರ್ಧಾರ ಹೊರಬಿದ್ದಿದೆ.

Tags: Environment Minister Eshwar KhandreGovernment of IndiaMinistry of Industries
Previous Post

Hair care: ಸ್ಪ್ಲಿಟ್ ಎಂಡ್ ಸಮಸ್ಯೆಗೆ ಈ ಸರಳ ಟಿಪ್ಸ್ ನ ಫಾಲೋ ಮಾಡಿ.!

Next Post

ರಾಜ್ಯಾದ್ಯಂತ 400 ಸ್ಕ್ರೀನ್ ಗಳಲ್ಲಿ ತೆರೆಕಂಡ ಭೀಮ ! ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ !

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ರಾಜ್ಯಾದ್ಯಂತ 400 ಸ್ಕ್ರೀನ್ ಗಳಲ್ಲಿ ತೆರೆಕಂಡ ಭೀಮ ! ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ !

ರಾಜ್ಯಾದ್ಯಂತ 400 ಸ್ಕ್ರೀನ್ ಗಳಲ್ಲಿ ತೆರೆಕಂಡ ಭೀಮ ! ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!