• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, November 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್‌-ಚಾಮರಾಜನಗರ:ಕರ್ನಾಟಕದಲ್ಲಿ ಇಂದು ವಿಶ್ವ ದಾಖಲೆ ನಿರ್ಮಾಣ

ಪ್ರತಿಧ್ವನಿ by ಪ್ರತಿಧ್ವನಿ
September 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ.

ADVERTISEMENT

ರಾಜ್ಯದ ಗಡಿ ಜಿಲ್ಲೆಗಳಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ನಿರ್ಮಿಸಲಿದ್ದಾರೆ.

ಇದೇವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಲಿದ್ದಾರೆ. ಹಾಗೆಯೇ, ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನೂ ನೆಡಲಿದ್ದಾರೆ. ಈ ಮೂಲಕ ಅಂದು ರಾಜ್ಯಾದ್ಯಂತ 10ಲಕ್ಷ ಗಿಡಗಳನ್ನು ಹಾಕಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಇಡೀ ಕಾರ್ಯಕ್ರಮಕ್ಕಾಗಿ ಶ್ರಮಿಸುತ್ತಿದ್ದು, ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ ಹೆಚ್ಚಿನ ಆಸಕ್ತಿ ವಹಿಸಿ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಲಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡಲಿದೆ. ನಂತರ ಕಾರ್ಯಕ್ರಮ ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ. ಇದೆಲ್ಲದಕ್ಕೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ತಮ್ಮದೇ ರೀತಿಯಲ್ಲಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಹಾಗೆಯೇ ಡ್ರೋನ್ ಚಿತ್ರೀಕರಣ ಹಾಗೂ ಪ್ರತಿ ಜಿಲ್ಲೆಯ ತಾಲೂಕುಗಳ ಮಾಹಿತಿಗಳು ಕ್ಷಣಕ್ಷಣದಲ್ಲಿ ಲಭ್ಯವಾಗಿ ಆಯೋಜಕರ ನಡುವೆ ಸಂಪೂರ್ಣ ಸಮನ್ವಯದೊಂದಿಗೆ ನಡೆಯುವಂತೆ ಮಾಡುವ ವಿಶೇಷ ಸುಧಾರಿತ ತಂತ್ರಜ್ಞಾನದ ಜಾಲವೊಂದರ ಸಿದ್ಧತೆ ನಡೆಸಿದ್ದಾರೆ.

ಈ ವಿಶೇಷ ಮಾನವ ಸರಪಳಿ ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ಹಾದು ಹೋಗಲಿದ್ದು, ಎಲ್ಲಾ ಹಳ್ಳಿಗಳಲ್ಲೂ ಇದೊಂದು ಹಬ್ಬದಂತೆ ಆಚರಿಸುವಂತೆ ಮಾಡಲು ಸರಕಾರ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದೆ.

3 ಕೋಟಿ ಜನರ ಬೆಂಬಲದ ನಿರೀಕ್ಷೆ:ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ ಇದರ ಮೌಲ್ಯವನ್ನು ಹೆಚ್ಚು ಪ್ರಚಾರ ಮಾಡಿ ವಿಶ್ವ ಮಟ್ಟದಲ್ಲಿ ಸಾರುವ ಪ್ರಯತ್ನಕ್ಕೆ ಸರಕಾರ ಈ ಹಿಂದೆಯೇ ಕೈ ಹಾಕಿತ್ತು. ಹೀಗಾಗಿ ಕಳೆದ ವರ್ಷ 2023 ಸೆ.15ರಂದು ರಾಜ್ಯಾದ್ಯಂತ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ನಡೆಸಲಾಗಿತ್ತು. ಇದರಲ್ಲಿ ಸುಮಾರು 2.3 ಕೋಟಿ ಭಾಗವಹಿಸಿ ಸರಕಾರಕ್ಕೆ ಆಶ್ಚರ್ಯ ಉಂಟು ಮಾಡಿದ್ದರು.

ಇದರಿಂದ ಸ್ಫೂರ್ತಿ ಪಡೆದ ಸರಕಾರ ಈ ಬಾರಿ 25 ಲಕ್ಷ ಜನರು ರಾಜ್ಯದುದ್ದಕ್ಕೂ ನಿಂತು ಸಂವಿಧಾನ ಓದುವಂತೆ ಮಾಡುತ್ತಿದೆ. ಹೀಗಾಗಿ ಇದರಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸುಮಾರು 3 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಇದರಿಂದ ಇಡೀ ವಿಶ್ವ ಕರ್ನಾಕದ ಕಡೆ ನೋಡುವಂತಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಜಿಲ್ಲೆಗಳು ಸಕಲ ರೀತಿಯಲ್ಲಿ ಸಜ್ಜು:ಭಾನುವಾರ ಬೆಳಗ್ಗೆ 9 ಗಂಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಿದ್ದಾರೆ. ಆನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಕೆಲವರು ಸಮುದ್ರದಲ್ಲೇ ನಿಂತು ಮನವ ಸರಪಳಿ ರಚಿಸಲಿದ್ದಾರೆ.ಇದೇರೀತಿ ವೇಷ, ಭೂಷಣ ಹಾಗೂ ವಿಶೇಷ ಸಂದೇಶ ಸಾರುವ ವಿಭಿನ್ನ ಪ್ರಯತ್ನ ಮಾಡಿದ ಜಿಲ್ಲೆಗೆ ಪ್ರಶಸ್ತಿಯನ್ನೂ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ತಿಳಿಸಿದ್ದಾರೆ.

Tags: 2500km human chainDemocracy DayGovernment of Karnataka
Previous Post

ವಿದೇಶದಲ್ಲಿ ವಂಚನೆ ಮಾಡುವ ದೇಶೀ ಸೈಬರ್‌ ವಂಚಕರ ಪತ್ತೆಗೆ ಅಮೆರಿಕ ಭಾರತ ಜಂಠಿ ಕಾರ್ಯಾಚರಣೆ

Next Post

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕಾಶ್ಮೀರಿ ಪಂಡಿತರ ಕರೆ

Related Posts

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಆರೋಪ; ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸಂಪುಟ ಅಸ್ತು!
ಕರ್ನಾಟಕ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಆರೋಪ; ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸಂಪುಟ ಅಸ್ತು!

by Shivakumar
November 19, 2026
0

ಹನ್ನೆರಡನೇ ಶತಮಾನದ ಸಮಾಜ ಸುಧಾರಕ, ಭಕ್ತಿ ಭಂಡಾರಿ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಅಂಶಗಳಿವೆ ಎಂಬ ಆರೋಪಕ್ಕೆ ಗುರಿಯಾಗಿರುವ ಲೇಖಕ ರವಿ ಹಂಜ್ ಅವರ ‘ಬಸವ ಮಂಟಪ’ ಕೃತಿ...

Read moreDetails
ಡಿಕೆಶಿ ಗೃಹಪ್ರವೇಶದ ಔತಣಕೂಟಕ್ಕೆ ವಾಟಾಳ್ ನಾಗರಾಜ್ ಎಂಟ್ರಿ; ಕುಮಾರಕೃಪಾ ಉಳಿಸಲು ಹೋರಾಟದ ಎಚ್ಚರಿಕೆ!

ಡಿಕೆಶಿ ಗೃಹಪ್ರವೇಶದ ಔತಣಕೂಟಕ್ಕೆ ವಾಟಾಳ್ ನಾಗರಾಜ್ ಎಂಟ್ರಿ; ಕುಮಾರಕೃಪಾ ಉಳಿಸಲು ಹೋರಾಟದ ಎಚ್ಚರಿಕೆ!

November 19, 2026
Protest by ASHA workers: What did D.K. Shivakumar say?

ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

November 19, 2026
Allegation of disrespect towards Basavanna: B.Y. Vijayendra demands seizure of Ravi Hanj's work

ಬಸವಣ್ಣನವರ ಗೌರವಕ್ಕೆ ಧಕ್ಕೆ ಆರೋಪ: ರವಿ ಹಂಜ್ ಕೃತಿ ಮುಟ್ಟುಗೋಲಿಗೆ ಬಿ.ವೈ. ವಿಜಯೇಂದ್ರ ಆಗ್ರಹ

November 19, 2026
BREAKING: CM’s meeting with ASHA workers fails?

BREAKING : ಆಶಾ ಕಾರ್ಯಕರ್ತೆಯರೊಂದಿಗಿನ ಸಿಎಂ ಸಭೆ ವಿಫಲ? ಡಿಕೆಶಿ ಪ್ರತಿಕ್ರಿಯೆಗೆ ಕಾರ್ಯಕರ್ತೆಯರ ತೀವ್ರ ಅಸಮಾಧಾನ

November 19, 2026
Next Post
ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕಾಶ್ಮೀರಿ ಪಂಡಿತರ ಕರೆ

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕಾಶ್ಮೀರಿ ಪಂಡಿತರ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada