• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್|: ಮಳೆಯಲ್ಲೇ ಕೊಡೆ ಹಿಡಿದು ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್:15, 20 ವರ್ಷಗಳಿಂದ ನಡೆಸಲಾಗುತ್ತಿರುವ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದವರು ನಗರದಲ್ಲಿ ಗುರುವಾರ ಜಿಟಿಜಿಟಿ ಮಳೆಯಲ್ಲೇ ಕೊಡೆಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಪದಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಗರದ ಸಾಯಿ ಶಾಲೆ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸಿ, ಆನಂತರ ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು.

ADVERTISEMENT

ಮಾರ್ಗದುದ್ದಕ್ಕೂ ಘೋಷಣೆಗಳನ್ನು ಕೂಗಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.ರಾಜ್ಯ ಸರ್ಕಾರ ತಕ್ಷಣವೇ ಅನುದಾನ ರಹಿತ ಖಾಸಗಿ ಶಾಲೆಗಳ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟದ ನೇತೃತ್ವ ವಹಿಸಿದ್ದ ಸಂಘದ ಗೌರವ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಹೇಳಿದರು.

ಸಂಘದ ಎಂಟು ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ 42 ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ಮಾಡಲಾಗುವುದು. ಬಡ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿದ್ದ ಆರ್.ಟಿ.ಇ ಮರು ಜಾರಿಗೊಳಿಸಬೇಕು. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸರ್ಕಾರದಿಂದ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುತ್ತಿರುವುದನ್ನು ಕೈ ಬಿಟ್ಟು ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಬೇಕು. ಶಾಲಾ ಕಟ್ಟಡದ ಕರದಲ್ಲಿ ರಿಯಾಯಿತಿ ಕಲ್ಪಿಸಬೇಕು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಕಾಯ್ದೆಯಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಅನಧಿಕೃತ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿದರು.

ತಡೋಳಾದ ರಾಜೇಶ್ವರ ಶಿವಾಚಾರ್ಯ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಮುಚಳಂಬದ ಪ್ರಣವಾನಂದ ಸ್ವಾಮೀಜಿ, ಸಂಘದ ಅಧ್ಯಕ್ಷ ರಾಜೇಂದ್ರ ಮಣಗೇರಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಸಲಾಹುದ್ದೀನ್ ಫರಾನ್, ಸಂಘದ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಅಕ್ಷಯ್ ಮುದ್ದಾ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಧನರಾಜ ದೊಡ್ಡಮನಿ, ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಹುಡಗಿಕರ್, ಔರಾದ್ ತಾಲ್ಲೂಕು ಅಧ್ಯಕ್ಷ ಸಂಜೀವಕುಮಾರ ಶೆಟಕಾರ್, ಬೀದರ್ ತಾಲ್ಲೂಕು ಅಧ್ಯಕ್ಷ ಸಂದೀಪ್ ಶೆಟಕಾರ್, ಕಮಲನಗರ ತಾಲ್ಲೂಕು ಅಧ್ಯಕ್ಷ ಸಂಜುಕುಮಾರ ಕಂಠಾಳೆ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಸೈಯದ್ ಅಹಮ್ಮದ್, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಮುಖರಾದ ಗುಂಡಯ್ಯ ತೀರ್ಥ, ಪೂರ್ಣಿಮಾ ಜಿ., ಸುರೇಶ ಚನಶೆಟ್ಟಿ ಹಾಜರಿದ್ದರು.

Tags: #[pratidhvanidigitalEducation and EmploymentGovernment of KarnatakaIswara Khandre
Previous Post

ಬೀದರ್ | ‘ಬುಡಾ’ ಮಾಜಿ ಅಧ್ಯಕ್ಷ, ಆಯುಕ್ತರಿಗೆ ಬಂಧನದ ಭೀತಿ

Next Post

ಭಾರತ ಬಾಂಗ್ಲಾ ಗಡಿ ವ್ಯಾಪಾರ ಕೇಂದ್ರ ನಾಲ್ಕು ವರ್ಷಗಳ ನಂತರ ಪುನಾರಂಭ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಭಾರತ ಬಾಂಗ್ಲಾ ಗಡಿ ವ್ಯಾಪಾರ ಕೇಂದ್ರ ನಾಲ್ಕು ವರ್ಷಗಳ ನಂತರ ಪುನಾರಂಭ

ಭಾರತ ಬಾಂಗ್ಲಾ ಗಡಿ ವ್ಯಾಪಾರ ಕೇಂದ್ರ ನಾಲ್ಕು ವರ್ಷಗಳ ನಂತರ ಪುನಾರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada