
ಬೆಂಗಳೂರು:ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ರಚಿಸಲಾಗಿದ್ದ ತನಿಖಾ ತಂಡಗಳು ತನಿಖೆ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದು, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್‌ನ ಯುಬಿ ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡಗಳನ್ನು ರಚಿಸಲಾಗಿತ್ತು ಎಂದರು.
ಹಿಂದಿನ ಆಯುಕ್ತರು ಮತ್ತು ಅಧ್ಯಕ್ಷರು ನಿಯಮ ಉಲ್ಲಂಘನೆ ಮಾಡಿದ್ದಾರೆ. ನಿವೇಶನ ಹಂಚಿಕೆಯಲ್ಲಿ ಕಾರ್ಯವಿಧಾನ ಅನುಸರಿಸಿಲ್ಲ. ಇದರಿಂದ ನಮ್ಮ ಪ್ರಾಧಿಕಾರಕ್ಕೆ ಆರ್ಥಿಕ ನಷ್ಟ ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಇಲಾಖೆಯಿಂದ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಹೇಳಿದ್ದೇವೆ ಎಂದರು.