• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಬಿಜೆಪಿಯಿಂದ ದೊಡ್ಡ ಬದಲಾವಣೆ : ಕಾಂಗ್ರೆಸ್‌ ನಿಂದ ಏನು ಅಭಿವೃದ್ಧಿ ಆಗಿಲ್ಲ ; ಸಿಎಂ ಬೊಮ್ಮಾಯಿ

Any Mind by Any Mind
April 3, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ದೇಶದಲ್ಲಿ ಬಿಜೆಪಿಯಿಂದ ದೊಡ್ಡ ಬದಲಾವಣೆ : ಕಾಂಗ್ರೆಸ್‌ ನಿಂದ ಏನು ಅಭಿವೃದ್ಧಿ ಆಗಿಲ್ಲ ; ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಏ.೦೩: ಇಡೀ ವಿಶ್ವದಲ್ಲಿಯೇ ಭಾರತೀಯ ಜನತಾ ಪಾರ್ಟಿ ಅತಿ ದೊಡ್ಡ ಪಕ್ಷ. ಕರ್ನಾಟಕದಲ್ಲೂ ಕೂಡ ಈ ಪಕ್ಷ ಬಹಳ ಆಳವಾಗಿ‌ ಬೇರೂರಿರುವ ಪಕ್ಷವಾಗಿದ್ದು, ಅತ್ಯಂತ ಉತ್ತಮ ಸಂಘಟನೆ ಹೊಂದಿರುವ ಪಕ್ಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಬೆಳೆದು ಬಂದು ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಏಕಾಂಗಿಯಾಗಿ ಪಕ್ಷ ಬೆಳೆಸಿದವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಅವರ ನೇತೃತ್ವದಲ್ಲಿ ಬಿಜೆಪಿ ಪ್ರತಿ ಬಾರಿಯೂ ಬೆಳೆಯುತ್ತಾ ಬಂದಿದೆ ಎಂದಿದ್ದಾರೆ.

ದಿವಂಗತ ಅನಂತ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಳೆದ ಪಕ್ಷ. ರೈತರಿಗೆ ವಿಶೇಷ ಬಜೆಟ್ ಕೊಡುವುದರ ಜೊತೆಗೆ ಎಲ್ಲಾ ವರ್ಗಗಳಿಗೂ ಹಲವು ಯೋಜನೆಗಳನ್ನು ನೀಡಿದೆ ಎಂದರು.

ಅಸ್ಥಿರತೆ ಉಂಟು ಮಾಡಿದ ಯುಪಿಎ

ಈ ಹಿಂದಿನ ಯುಪಿಎ ಸರ್ಕಾರ ದೇಶದಲ್ಲಿ ಅಸ್ಥಿರತೆ ಉಂಟು ಮಾಡಿತ್ತು. ಆರ್ಥಿಕವಾಗಿ ಅಸ್ಥಿರತೆ ಉಂಟಾಗಿ ಭ್ರಷ್ಟಾಚಾರದ ಸುರಿಮಳೆಯೇ ಆಯಿತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಏನು ಮಾಡಲಾಗಿದೆ ಎಂದು ಪ್ರಶ್ನಿಸುವ ಕಾಂಗ್ರೆಸ್ ಏನು ಮಾಡಿಲ್ಲ ಎಂದು ಸಿದ್ದರಾಮಯ್ಯನ ಮಾತಿನ ಶೈಲಿಯಲ್ಲೇ ಮಾತನಾಡಿ ವ್ಯಂಗ್ಯವಾಡಿದ ಸಿಎಂ, ನಿಮ್ಮ ಆಡಳಿತದ ಅವಧಿಯಲ್ಲಿ ಏನು ಮಾಡಿದ್ದೀರಿ ಎಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಚುನಾವಣೆಗೆ ಬಿಜೆಪಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದು, ನಾವು ಮಾಡಿದ ಸಾಧನೆಯ ವರದಿ ಹಿಡಿದು ಮತ ಕೇಳುತ್ತಿದ್ದೇವೆ. ಜೊತೆಗೆ ಕಾಂಗ್ರೆಸ್ ನ ದುರಾಡಳಿತದ ಬಗ್ಗೆಯೂ ಜನರಿಗೆ ತಿಳಿಸಲಾಗುವುದು. ಕಾಂಗ್ರೆಸ್ ನವರು ಧರ್ಮ ಒಡೆಯುವ ಕೆಲಸ ಮಾಡಿದರು. ಆದರೆ ನಾವು ಧರ್ಮಗಳನ್ನು ಜೋಡಣೆ ಮಾಡುವ ಕೆಲಸ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಕೋಮು ಗಲಭೆಗಳಾದವು. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿತ್ತು, ರಾಜ್ಯದ ಅಭಿವೃದ್ಧಿಯೇ ಆಗಿರಲಿಲ್ಲ, ಹೀಗಾಗಿ ಹಿಂದ ಸರ್ಕಾರದ್ದು ಕರಾಳ ದಿನಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಇದ್ದಾಗ 50ಕ್ಕೂ ಹೆಚ್ಚು ಹಗರಣಗಳು ನಡೆದವು. ಲೋಕಯುಕ್ತ ನಿಷ್ಕ್ರಿಯ ಗೊಳಿಸಿ, ಎಸಿಬಿಯನ್ನು ರಚಿಸಿ ನಾವು ಏನೂ ಮಾಡಿಲ್ಲ ಎಂದು ಜನರ ಕಣ್ಣಿಗೆ ಮಣ್ಣು ಎರೆಚಿದ್ದಾರೆ. ಅವರ ಕಾಲದಲ್ಲಿ ಲೋಕಯುಕ್ತ ಇದ್ದಿದ್ದರೆ, 100 ಪ್ರಕರಣಗಳು ಅವರ ಮೇಲೆ ಇರುತ್ತಿದ್ದವು. ನಮ್ಮ ಕಾಲದಲ್ಲಿ ಭ್ರಷ್ಟಾಚಾರದೊಂದಿಗೆ ರಾಜಿ ಇಲ್ಲ. 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ ಅವರು ಅದರ ಬಗ್ಗೆ ದಾಖಲೆ ಕೊಡಲಿ. ಭ್ರಷ್ಟಾಚಾರದ ಬಗ್ಗೆ ಮಾತಾಡಲು ಇವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದಿದ್ದಾರೆ.

ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ

ಬಂಜಾರ ಸಮುದಾಯವನ್ನು ನಾವು ಕರೆದು ಮಾತನಾಡುತ್ತೇವೆ. ಬಂಜಾರ, ಭೋವಿ, ಕೊರಮ, ಕೊರಚ, ಈ ನಾಲ್ಕನ್ನು ಎಸ್ಸಿ ಪಟ್ಟಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಸದಾಶಿವ ಆಯೋಗದ ಬಿಟ್ಟು, ಸಚಿವ ಸಂಪುಟ ಉಪ ಸಮಿತಿ ಪ್ರಕಾರ ಮೀಸಲಾತಿ ಪರಿಷ್ಕರಣೆ ಮಾಡಿದ್ದೇವೆ. ಅವರಿಗೆ ಮೀಸಲಾತಿ ಪ್ರಮಾಣ ಕೂಡ ಜಾಸ್ತಿಯಾಗಿದೆ. ಇದರ ಬಗ್ಗೆ ಅಪ ಪ್ರಚಾರ ಮಾದುತ್ತಿದ್ದಾರೆ.

ಕಾಂಗ್ರೆಸ್ ನೇತಾರರು ಎಲ್ಲೆಲ್ಲಿ ಸ್ಪರ್ಧೆ ಮಾದುತ್ತಾರೋ ಅಲ್ಲಿ ಇದನ್ನು ರಾಜಕೀಯ ವಾಗಿ ಬಳಸಿಕೊಳ್ಳಲು ಯೋಜನೆ ಮಾಡಿದ್ದಾರೆ. ಆದರೆ ಇದನ್ನು ನಾವು ರಾಜಕೀಯವಾಗಿ ಹೋರಾಡಲು ಮಾಡಲು ಸಿದ್ದರಿದ್ದೇವೆ ಎಂದು ಹೇಳಿದ್ದಾರೆ.

ಶಿಗ್ಗಾವಿ ಕ್ಷೇತ್ರದಿಂದಲೇ ಸ್ಪರ್ಧೆ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಪ ಪಡಿಸಿದ್ದಾರೆ.

Tags: BJP GovernmentbjpkarnatakacmbommaiCongress PartyDKShivakumarKPCClaetstnewslivenewssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ರಾಮ್‌ಚರಣ್‌ ದುಡ್ಡಿಗಾಗಿ ಮಾದುವೆಯಾಗಿದ್ದಾರೆ ಎಂದಿದ್ದರು… ಕಹಿ ದಿನಗಳನ್ನು ನೆನೆದ ಉಪಾಸನಾ..!

Next Post

ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್

ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ, ಪಾಪದ ಹೊರೆ ಇಳಿಸಿಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ : ಹೆಚ್. ವಿಶ್ವನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada