• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ಜಾಗತಿಕ ನಾಯಕವಾಗಲು ಕರ್ನಾಟಕದಿಂದ ದೊಡ್ಡ ಕೊಡುಗೆ: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ಇದೀಗ
0
ಭಾರತ ಜಾಗತಿಕ ನಾಯಕವಾಗಲು ಕರ್ನಾಟಕದಿಂದ ದೊಡ್ಡ ಕೊಡುಗೆ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಭಾರತವನ್ನು ಜಾಗತಿಕ ನಾಯಕವಾಗಿಸಲು ಪ್ರಧಾನಿಗಳ ಆಶಯದಂತೆ  ಕರ್ನಾಟಕ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರಿಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಚಾಲನೆಗೊಂಡ ಏರೋ ಇಂಡಿಯಾ ಶೋ 2023 ಕಾರ್ಯಕ್ರಮದಲ್ಲಿ ಪ್ರಧಾನಿಗಳೊಂದಿಗೆ ಪಾಲ್ಗೊಂಡು ಮಾತನಾಡಿದರು.

ಏರೋ ಇಂಡಿಯಾ ಶೋ 14ನೇ ಆವೃತ್ತಿಯು  ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿ ಯಾಗಿದ್ದು,  ಅಂತರರಾಷ್ಟ್ರೀಯ ಮಟ್ಟದ ಅತಿ  ದೊಡ್ಡ ಏರ್ ಶೋ ಆಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್  ಏರ್ ಶೋ ನಡೆಯದಿದ್ದಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತು.  ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ, ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದರು.

ಕರ್ನಾಟಕ ಹಿಂತಿರುಗಿ ನೋಡಿಲ್ಲ

ಕರ್ನಾಟಕದಲ್ಲಿ 1940 ರಲ್ಲಿ ಹೆಚ್.ಯೇ.ಎಲ್, 1950 ರಲ್ಲಿ ಬಿ ಹೆಚ್.ಇ.ಎಲ್, ಬಿ.ಇ. ಎಲ್, ಡಿ.ಆರ್.ಡಿ ಒ ಸ್ಥಾಪನೆಗೊಂಡವು. 1960 ರಲ್ಲಿ ಇಸ್ರೋ ಕಾರ್ಯಾರಂಭ ಮಾಡಿದರೆ, 1970 ರಲಿ ಮೊದಲ ಸ್ಯಾಟಲೈಟ್  ಆರ್ಯಭಟ ಉಪಗ್ರಹವನ್ನು ಬೆಂಗಳೂರಿನಲ್ಲಿ ತಯಾರಿಸಲಾಯಿತು. ಅಲ್ಲಿಂದ ನಾವು ಹಿಂತಿರುಗಿ ನೋಡಿಲ್ಲ. ಈಗ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ರಕ್ಷಣಾ ವಲಯದ  ಶೇ 65 ಉತ್ಪಾದನೆ ಬೆಂಗಳೂರಿನಲ್ಲಿ ಆಗುತ್ತಿದೆ ಎಂದರು.

45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ

ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು,  ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನು ತೊಡಗಿಸಿಕೊಳ್ಳಲಾಗುವುದು ಎಂದರು. 

ಕರ್ನಾಟಕ 14 ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ  ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ  ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದರು.

Tags: ಏರೋ ಇಂಡಿಯಾ ಶೋ 2023ನರೇಂದ್ರ ಮೋದಿಬಿಜೆಪಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಕೊಡಗು: 24 ಗಂಟೆಯಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ- ಹುಲಿ ಸೆರೆಗೆ ಕಾರ್ಯಾಚರಣೆ

Next Post

ವಿರೋಧ ಪಕ್ಷಗಳನ್ನು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ದುರ್ಬಳಕೆಯಾಗುತ್ತಿದೆ

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post
ವಿರೋಧ ಪಕ್ಷಗಳನ್ನು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ದುರ್ಬಳಕೆಯಾಗುತ್ತಿದೆ

ವಿರೋಧ ಪಕ್ಷಗಳನ್ನು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ದುರ್ಬಳಕೆಯಾಗುತ್ತಿದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada