ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakuamar) ವಿರುದ್ಧದ ಸಿಬಿಐ (CBI) ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ (CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (supreme court) ವಿಚಾರಣೆ ನಡೆಸಿತು. ಆದ್ರೆ, ಇಂದು ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೇ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಸಿಬಿಐಗೆ ತಿಳಿಸಿ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಇದರಿಂದ ಡಿಕೆ ಶಿವಕುಮಾರ್ ಅವರಿಗೆ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.


ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.