ಮಾಜಿ ಸಚಿವ, ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿಗೆ (Janardhana reddy) ತೆಲಂಗಾಣ ಹೈಕೋರ್ಟ್‌ನಿಂದ (Highcourt) ಇಂದು ಬಿಗ್ ರಿಲೀಫ್ ಸಿಕ್ಕಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆಸಿದ ಅಕ್ರಮ ಗಣಿಗಾರಿಕೆ (Illegal mining) ಪ್ರಕರಣದಲ್ಲಿ, ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ (CBI court) 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಆದ್ರೆ ಇದೀಗ ಸಿಬಿಐ ಕೋರ್ಟ್ ಆದೇಶಕ್ಕೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಳಿ 10 ಲಕ್ಷ ರೂಪಾಯಿ ಶ್ಯೂರಿಟಿ ಹಾಗೂ ಪಾಸ್‌ಪೋರ್ಟ್ ವಶಕ್ಕೆ ಪಡೆಯಲು ತೆಲಂಗಾಣ ಹೈಕೋರ್ಟ್ ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳ ಮುನ್ನ ಓಬಳಾಪುರ ಅಕ್ರಮ ಗಣಿಗಾರಿಕೆ ಕೇಸ್ ನಲ್ಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ಮಹತ್ವದ ಆದೇಶ ನೀಡಿತ್ತು.ಅದಾಗಲೇ ಗಣಿಗಾರಿಕೆ ಕೇಸ್ ನಲ್ಲಿ 3 ವರ್ಷ ಜೈಲುಪಾಲಾಗಿ ಹೊರಬಂದಿದ್ದ ರೆಡ್ಡಿಗೆ ಈ ತೀರ್ಪಿನಿಂದ ಮತ್ತೆ ಜೈಲು ಸೇರುವ ಭೀತಿ ಎದುರಾಗಿತ್ತು. ಆದ್ರೆ ಇದೀಗ ತೆಲಂಗಾಣ ಹೈಕೋರ್ಟ್ ಈ ಆದೇಶಕ್ಕೆ ತಡೆ ನೀಡಿದೆ.