ಶಿಗ್ಗಾವಿಯ ಉಪಚುನಾವಣೆಯ ಪ್ರಚಾರ ಭಾಷಣದ ವೇಳೆ ವಕ್ಫ್ ಬೋರ್ಡ್ ಆಸ್ತಿಯ ವಿವಾದಗಳ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಡಿದ್ದ ಮಾತುಗಳು ವಿವಾದಕ್ಕೆ ಕಾರಣವಾಗಿ ಅವರ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು.
ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಬೆಂಕಿ ಹಚ್ಚಿದ್ದ ವಕ್ಫ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿತ್ತು. ಶಿಗ್ಗಾವಿಯ ಸವಣೂರಿನಲ್ಲಿ ನಿಂತು ಎಲ್ಲೇ ಕಲ್ಲು ಎಸೆದರೂ ಅದು ಬಿದ್ದ ಜಾಗ ವಕ್ಫ್ ಆಸ್ತಿ ಎಂಬಂತಾಗಿದೆ. ರೈತರ ಜಮೀನು, ಮಠ ಮಾನ್ಯ ಎಲ್ಲವನ್ನು ವಕ್ಫ್ ಆಸ್ತಿ ಎನ್ನುತ್ತಾರೆ ಎಂದು ಬಸವರಾಜ ಬೊಮ್ಮಾಯಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು.
ಈ ಎಫ್.ಐ.ಆರ್ ಪ್ರಶ್ನಿಸಿ ಬಸವರಾಜ ಬೊಮ್ಮಾಯಿ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಸದ್ಯ ಈ ಪ್ರಕರಣದಲ FIR ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.