
ಬೆಂಗಳೂರು :ಕೆಎಸ್ಆರ್ಟಿಸಿ ಸೇರಿದಂತೆ 4 ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, 15% ರಷ್ಟು ಟಿಕೆಟ್ ದರ ಏರಿಕೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು.

2014 ನಂತರ 2020ರಲ್ಲಿ ದರ ಏರಿಕೆ ಮಾಡಲಾಗಿತ್ತು. ಇದೀಗ ಸರ್ಕಾರ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿ, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಮಾಡಿದೆ.
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ,ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಶೇ.15ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ. ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು.





