
ಹಾಸನ:ಇಂದು ರಾಜ್ಯಾದ್ಯಂತ ಪಿಡಿಒ ನೇಮಕಾತಿ ಪರೀಕ್ಷೆ (PDO Exam) ನಡೆಯುತ್ತಿದೆ. ಪಿಡಿಒ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಪರೀಕ್ಷಾರ್ಥಿಗಳಿಗೆ (PDO exam contestants) ಪರೀಕ್ಷಾ ಕೇಂದ್ರದ ಸಿಬ್ಬಂದಿ ಶಾಕ್ ನೀಡಿದ್ದು, ಉದ್ದ ತೋಳಿನ ಅಂಗಿಗಳಿಗೆ ಕತ್ತರಿ ಹಾಕಿದರು.

ಪರೀಕ್ಷೆಗೆ ತುಂಬು ತೋಳಿನ ಬಟ್ಟೆ ಧರಿಸಿ ಬಂದಿದ್ದ ಅಭ್ಯರ್ಥಿಗಳ ಬಟ್ಟೆಯನ್ನು ಕತ್ತರಿಸಲಾಗಿದೆ. ಅರ್ಧ ತೋಳಿನವರೆಗೆ ಬಟ್ಟೆ ಕತ್ತರಿಸಿ ಸಿಬ್ಬಂದಿ ಒಳಗೆ ಬಿಟ್ಟಿದ್ದಾರೆ. ಹಾಸನದ (Hasan news) ಎವಿಕೆ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದೆ. ಈ ವೇಳೆ ಅಧಿಕಾರಿಗಳು ಮತ್ತು ಪರೀಕ್ಷಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.

ವಸ್ತ್ರ ಸಂಹಿತೆ ನಿಯಮ ಪಾಲಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಸ್ತ್ರ ಸಂಹಿತೆ ಸೇರಿ ಅಭ್ಯರ್ಥಿಗಳು ಪಾಲಿಸಬೇಕಾದ ಸೂಚನೆಗಳನ್ನು ಮೊದಲೇ ತಿಳಿಸಲಾಗಿದೆ. ನಮ್ಮ ಕರ್ತವ್ಯ ನಾವು ಮಾಡಲೇಬೇಕಿದೆ. ಪರೀಕ್ಷಾ ಸೂಚನೆಯಲ್ಲಿ ಈ ಬಗ್ಗೆ ತಿಳಿಸಲಾಗಿದೆ ಎಂದು ಪರೀಕ್ಷಾ ಕೇಂದ್ರದ ಸಿಬ್ಬಂದಿ ಹೇಳಿದ್ದಾರೆ.