ಗಾಂಧಿ ನಗರ: ಲೋಕಸಭಾ ಚುನಾವಣೆಯಲ್ಲಿ ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಗುಜರಾತ್ನ ಗಾಂಧಿ ನಗರ ಕ್ಷೇತ್ರದಿಂದ ಅಮಿತ್ ಶಾ ಭರ್ಜರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್, ಅಮಿತ್ ಶಾ ವಿರುದ್ಧ ತೀವ್ರ ಮುಖಭಂಗ ಅನುಭವಿಸಿದ್ದಾರೆ. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಈ ಕ್ಷೇತ್ರ ಪ್ರತಿನಿಧಿಸಿದ್ದರು. ಇದಕ್ಕೂ ಮುನ್ನ 1996ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಈ ಕ್ಷೇತ್ರದಿಂದ ಗೆಲುವು ಕಂಡಿದ್ದರು.
ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ಅಮಿತ್ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷದ ನಾಯಕರು ನಾಮಪತ್ರ ಹಿಂಪಡೆದಿದ್ದರು.