2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ ಗೆಲುವಿನ ನಗೆ ಬೀರಿರುವ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯತೆ ಜನತೆಗೆ ಭರವಸೆ ನೀಡಿದ್ದಾರೆ.

ʻಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಮ್ಮ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ರಾಜ್ಯದ ಜನತೆ ಇನ್ನು ನೆಮ್ಮದಿಯಿಂದ ಇರಬಹುದು. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿʼ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ..