ಹುಲಿ ಉಗುರು ಲಾಕೆಟ್ ಧರಿಸಿದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
2 ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರಕ್ಕೆ ಸಂತೋಷ್ ರನ್ನು ಕರೆದೊಯ್ದಿದ್ದಾರೆ.

ಹುಲಿ ಉಗುರು ಲಾಕೆಟ್ ಧರಿಸಿದ ಆರೋಪದ ಮೇರೆಗೆ ನಿನ್ನೆ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.