ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಹೊಸ ಅವಕಾಶದ ಕುರಿತು ಮಾಹಿತಿ ನೀಡಿದ್ದಾರೆ.ಈ ಬಾರಿ ಬಿಗ್ ಬಾಸ್ ಕನ್ನಡ 13ಕ್ಕೆ ಸಾಮಾನ್ಯ ಜನರಿಗೂ ಸ್ಪರ್ಧಿಗಳಾಗಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಲರ್ಸ್ ಕನ್ನಡ ವಾಹಿನಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ ಹಲವರಿಗೆ ಮಾಹಿತಿ ಕೊರತೆ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಆಡಿಷನ್‌ನಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇದೀಗ ಅಂತಹ ಅಭ್ಯರ್ಥಿಗಳಿಗಾಗಿ ‘ವೈಟ್ ಗೋಲ್ಡ್ ಮನಿ’ ವತಿಯಿಂದ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ಅನುಪಮಾ ಗೌಡ ತಿಳಿಸಿದ್ದಾರೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.ಅರ್ಜಿ ಸಲ್ಲಿಸಲು ಆಸಕ್ತರು ವೈಟ್ ಗೋಲ್ಡ್ ಮನಿಯ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.

ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳು ಮತ್ತು ಷರತ್ತುಗಳು ಅನ್ವಯವಾಗಲಿದ್ದು, ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.ಬಿಗ್ ಬಾಸ್ ಮನೆ ಪ್ರವೇಶಿಸುವ ಕನಸು ಹೊಂದಿರುವವರಿಗೆ ಇದು ಮತ್ತೊಂದು ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅವಕಾಶ ದೊರೆಯಬಹುದು.





