• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ರಾಜಕೀಯ, ವಿಶೇಷ
0
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Share on WhatsAppShare on FacebookShare on Telegram
ADVERTISEMENT

ದೇಶದಾದ್ಯಂತ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಕಣ ಕಾವೇರುತ್ತಿದೆ. ನವೆಂಬರ್‌ 6ರಿಂದ ನವೆಂಬರ್‌ 11ವರೆಗೆ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ನವೆಂಬರ್‌ 14ರಂದು ಫಲಿತಾಂಶ ಹೊರಬೀಳಲಿದೆ.

ಒಟ್ಟು 243 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ -ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಹಾಗೂ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ (ಮಹಾಘಟಬಂಧನ್) ಅಧಿಕಾರಕ್ಕೆ ಬರಲು 122 ಸ್ಥಾನ ಗೆಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಎರಡೂ ಮೈತ್ರಿಕೂಟಗಳು ಚುನಾವಣಾ ಅಖಾಡಕ್ಕಿಳಿದಿದ್ದು, ಮತದಾರರನ್ನು ಸೆಳೆಯಲು ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆ ಗ್ಯಾರಂಟಿ ಚುನಾವಣೆಯಾಗುತ್ತಿದ್ದು, ಎರಡೂ ಮೈತ್ರಿಕೂಟಗಳು ಮತದಾರರಿಗೆ ಕೆಲವು ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿವೆ.

CM Siddaramaiah : ಪತ್ರಕರ್ತರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ಯಾಕೆ..? #pratidhvani #siddaramaiah

ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಗೆ (ಮಹಾಘಟಬಂಧನ್) ಈ ಬಾರಿ ಶತಾಯಗತಾಯ ಅಧಿಕಾರಕ್ಕೆ ಬರಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದು, ರಾಷ್ಟ್ರೀಯ ನಾಯಕರು ಸೇರಿದಂತೆ ಮೈತ್ರಿಕೂಟದ ಪ್ರತಿ ಪಕ್ಷಗಳು ಹಾಗೂ ಪ್ರತಿ ನಾಯಕರು ಕೂಡ ಚುನಾವಣಾ ಕಣದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಎನ್‌ಡಿಎ ಮೈತ್ರಿಕೂಟದ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನೇ ಪ್ರಚಾರದ ಕಣಕ್ಕಿಳಿಸಿದ್ದಾರೆ. ಎರಡೂ ಮೈತ್ರಿ ಕೂಟದ ರಾಷ್ಟ್ರೀಯ ನಾಯಕರು ಇಂದು ರಾಜ್ಯದ ಅನೇಕ ವಿಧಾನ ಸಭಾಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ.

ಇನ್ನು ಅತ್ತ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಬಿರುಸಿನ ಪ್ರಚಾರ ನಡೆಸುತ್ತಿದ್ದರೆ, ಇತ್ತ ಎನ್‌ಡಿಎ ಮೈತ್ರಿಕೂಟದ ಸ್ಥಳೀಯ ನಾಯಕರು ಕಣ್ಮರೆಯಾಗಿದ್ದಾರೆ. ಎನ್‌ಡಿಎ ಮೈತ್ರಿಕೂಟದಲ್ಲಿ ಇನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯಾಗದೇ ಇರುವುದರಿಂದಲೇ, ಸ್ಥಳೀಯ ನಾಯಕರು ಚುನಾವಣಾ ಪ್ರಚಾರ ಕಣದಿಂದ ದೂರ ಸರಿದಿದ್ದಾರಾ ಎನ್ನುವ ಪ್ರಶ್ನೆ ಮೂಡಲು ಕಾರಣವಾಗಿದೆ. ಇನ್ನು ಆಡಳಿರೂಢ ಪಕ್ಷದ ನಾಯಕರಾಗಿರುವ ನಿತೀಶ್‌ ಕುಮಾರ್‌ ಕೂಡ ಚುನಾವಣಾ ಅಖಾಡದಲ್ಲಿ ನಿರೀಕ್ಷಿಸಿದ ಮಟ್ಟದಲ್ಲಿ ಸಕ್ರೀಯರಾಗದೇ ಇರುವುದು ಅನೇಕ ಊಹಾಪೋಹಗಳಿಗೆ ಮೂಲವಾಗುತ್ತಿದೆ.

ಒಂದೆಡೆ ಮಹಾಘಟಬಂಧನ್ ನಾಯಕರು, ಬಿಹಾರ ಚುನಾವಣೆಯಲ್ಲಿ ಅಧಿಕಾರ ವಿರೋಧಿ ಅಲೆ, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತದ ಅಂಶಗಳಿಂದ ಎನ್‌ಡಿಎ ಮೈತ್ರಿಕೂಟ ಈ ಬಾರಿ ಸೋಲು ಕಾಣಲಿದೆ ಎನ್ನುವ ಭರವಸೆಯಲಿದ್ದರೆ, ಮತ್ತೊಂದೆಡೆ ಚುನಾವಣಾ ಪೂರ್ವ ಸಮೀಕ್ಷೆಗಳು ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ವರದಿ ಮಾಡುತ್ತಿದ್ದೆ. ಸಮೀಕ್ಷೆ ವರದಿ ಹಾಗೂ ನಾಯಕರ ಲೆಕ್ಕಾಚಾರ ಏನೇ ಇದ್ದರೂ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಭವಿಷ್ಯ ಮತದಾರರ ಕೈಯಲ್ಲಿದೆ. ಹೀಗಾಗಿ ಮತದಾರರು ಈ ಬಾರಿ ಯಾವ ಪಕ್ಷದ ಕೈಹಿಡಿಯಲ್ಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

CM Siddaramaiah : CM ಸಿದ್ದರಾಮಯ್ಯ ಪೊಲೀಸರ ಮುಂದೆ ಭರ್ಜರಿ ಕಾಮಿಡಿ..! #pratidhvani #karnatakapolice
Tags: Bihar electionBihar Election 2025BJPcongressJDUNarendra ModiRahul GandiRJDTejaswi Yadav
Previous Post

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

Next Post

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada