9ನೇ ತರಗತಿ ವಿದ್ಯಾರ್ಥಿನಿ ಪ್ರೇಮವನ್ನ ನಿರಾಕರಿಸಿದಿಕ್ಕೆ ಕುಪಿತಗೊಂಡ ಪಾಗಲ್ ಪ್ರೇಮಿ 15 ವರ್ಷದ ಬಾಲಕಿಯ ಕತ್ತಿಗೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಾಲಕಿ ತಾನು ಕೋಚಿಂಗ್ ಸೆಂಟರ್ನಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.
ಸದ್ಯ ವಿಡಿಯೋದಲ್ಲಿ ಕಂಡು ಬಂದಿರುವ ಹಾಗೆ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯೋರ್ವ ಏಕಾಏಕಿ ತನ್ನ ಬಳಿ ಇದ್ದ ಬಂದೂಕನ್ನು ತೆಗೆದು ಆಕೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗುತ್ತಿರುವುದು ಕಂಡು ಬರುತ್ತದೆ.
ಘಟನೆಯ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಾಥಮಿಕ ವರದಿ ಆಧಾರದ ಪ್ರಕಾರ ಸಂತ್ರಸ್ತ ಬಾಲಕಿಯು ಆರೋಪಿಯ ಪ್ರೀತಿ ನಿರಾಕರಿಸಿದ್ದಕ್ಕಾಗಿ ಆತ ಬಾಲಕಿಯ ಕತ್ತಿಗೆ ಗುಂಡು ಹಾರಿಸಿದ್ದಾನೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯ ಹೇಳಿಕೆ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಸದ್ಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತೊರುವ ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಗುರುತು ಪತ್ತೆಯಾಗಿದ್ದು ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಆರೋಪಿಯ ಹೆಡೆಮುರಿ ಕಟ್ಟಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.