2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ‘INDIA’ ಮೈತ್ರಿಕೂಟ ಈಗಾಗಲೇ ಸಭೆಗಳ ಮೇಲೆ ಸಭೆ ನಡೆಸುತ್ತಾ ತಯಾರಿಯನ್ನ ಆರಂಭಿಸಿದೆ ಹೀಗಾಗಿ ಮುಂದಿನ ದಿನಗಳಲ್ಲಿ ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಇನ್ನೂ ಕೆಲವು ರಾಜಕೀಯ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸೇರುವ ಸಾಧ್ಯತೆಯಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದು ಮತ್ತಿನ್ಯಾವ ಈ ಮೈತ್ರಿಕೂಟವನ್ನು ಸೇರಲಿವೆ ಎಂಬ ಕುತೂಹಲವನ್ನು ಹುಟ್ಟು ಹಾಕಿದೆ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟದ ಕಾರ್ಯತಂತ್ರ ಹಾಗೂ ಸೀಟು ಹಂಚಿಕೆಯಂತಹ ವಿಷಯಗಳ ಬಗ್ಗೆ ಚರ್ಚಿಸಲಾಗುವುದು, ಮತ್ತು ಆ ದಿನ ಇಂಡಿಯಾ ಮೈತ್ರಿಕೂಟದ ಲೋಗೋ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ನೀಡಿದ್ದಾರೆ
ಕೇವಲ ಇಷ್ಟು ಮಾತ್ರವಲ್ಲದೆ ಆ ದಿನ ನಡೆಯಲಿರುವ ಪ್ರಮುಖ ಸಭೆಯಲ್ಲಿ ಹಲವು ಕಾರ್ಯಸೂಚಿಗಳನ್ನು ಅಂತಿಮಗೊಳಿಸಲಾಗುವುದು’ ಎಂದು ತಿಳಿಸಿದರು.
‘2024ರ ಲೋಕಸಭಾ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಹಾಗಾಗಿ ಆ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇನೆ. ನನಗೆ ಯಾವುದೇ ಆಸೆ ಇಲ್ಲ’ ಎಂದು ಹೇಳುವ ಮೂಲಕ ಸದ್ಯಕ್ಕೆ ನಾವು 2024ರ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಥಾನಕ್ಕೂ ನಿರೀಕ್ಷೆಯನ್ನು ಇಟ್ಟುಕೊಂಡಿಲ್ಲ ಎಂದು ನೇರವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.
ಆಡಳಿತಾರೂಢ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ರಚಿಸಲಾಗಿರುವ 26 ಪಕ್ಷಗಳ ಮೈತ್ರಿಕೂಟವು ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಸಲಿದೆ.