ಪಾಟ್ನಾ: ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಬಿಹಾರ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್ ನಂಬರ್ ದಾಟಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎನ್ನುವ ಭರವಸೆಯಲ್ಲಿದ್ದ ಮಹಾಘಟ್‌ಬಂಧನ್ ನಾಯಕರಿಗೆ ತೀವ್ರ ಮುಖಭಂಗವಾಗಿದೆ.

ಬಿಹಾರ ವಿಧಾನ ಸಭಾ ಚುನಾವಣೆಯ ಫಲಿತಾಂಶದ ವಿವರ ಇಲ್ಲಿದೆ.
243 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ ಒಟ್ಟು 205 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಮಹಾಘಟ್‌ಬಂಧನ್ ಮೈತ್ರಿಕೂಟ 31 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇನ್ನು ಒಟ್ಟು 6 ಕ್ಷೇತ್ರದಲ್ಲಿ ಇತರೆ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ-95, ಜೆಡಿಯು-82, ಆರ್‌ಜೆಡಿ-25, ಎಲ್‌ಜೆಪಿಆರ್‌ವಿ-20, ಎಐಎಮ್‌ಐಎಮ್-6, ಎಚ್‌ಎಎಮ್‌ಎಸ್-5, ಹಾಗೂ ಇತರೆ 6 ಕ್ಷೇತ್ರದಲ್ಲಿ ಗೆಲವು ಸಾಧಿಸಿದೆ.
ಬಿಹಾರದ ಒಟ್ಟು 243 ಕ್ಷೇತ್ರಗಳಿಗೆ ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತದಲ್ಲಿ ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ.






