ಬಿಹಾರದಲ್ಲಿ ಸಂಭವಿಸಿದ ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಘಟನೆಯ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸುವಲ್ಲಿ ಸಾರಣ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಒಟ್ಟು 38 ಮಂದಿ ಮೃತಪಟ್ಟಿದ್ದು ಆರೋಪಿಗಳ ಪತ್ತಗಾಗಿ ವಿಶೇಷ ತಂಡವನ್ನ ರಚಿಸಲಾಗಿತ್ತು ದುರಂತದ ಪ್ರಮುಖ ಆರೋಪಿ ಹೋಮಿಯೋಪಥಿ ಕ್ಲಿನಿಕ್ನಲ್ಲಿ ಕಾಂಪೌಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರಪ್ರದೇಶದಿಂದರಾಸಾಯನಿಕ ಹಾಗೂ ಸಾರಾಯಿ ಸಾಗಿಸಲು ಉಪಯೋಗಿಸಿದ್ದ ವಾಹನ, ಖಾಲಿ ಬಾಟಲಿ ಹಾಗೂ ನಕಲಿ ಸಾರಾಯಿಯನ್ನು ತಯಾರಿಸಲು ಉಪಯೋಗಿಸಿದ್ದ ರಾಸಾಯನಿಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿಪಕ್ಷದ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿತ್ತು.