ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗ್ರಾಮಸ್ಥರು ಎಲ್ಲರ ಮುಂದೆ 5 ಬಸ್ಕಿ ಹೊಡೆಯುವ ಶಿಕ್ಷೆ ನೀಡಿರುವ ಘಟನೆ ಬಿಹಾರದ ನವಾದಾ ಜಿಲ್ಲಯೊಂದರ ಗ್ರಾಮದಲ್ಲಿ ನಡೆದಿದೆ.
ಸದ್ಯ ಆರೋಪಿ ಬಸ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಮಗುವಿನ ಮೇಲೆ ನಡೆದಿರುವ ಪ್ರಕರಣವ್ನ ಲಘುವಾಗಿ ಪರಿಗಣಿಸಿರುವುದಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ ಮತ್ತು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.
ಆರೋಪಿಯೂ 5 ವರ್ಷದ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಗ್ರಾಮಸ್ಥರು ಆತನನ್ನು ಹಿಡಿದು ಊರಿನ ಪ್ರಮುಖರ ಮುಂದೆ ಹಾಜರುಪಡಿಸಿದರು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಕಾರಣಕ್ಕೆ ಐದು ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿದೆ ಎಂದು ತಿಳಿದು ವರದಿಯಾಗಿದೆ.
ಘಟನೆಯ ವಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಹಾರ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿರುವ ನೆಟ್ಟಿಗರು ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ ಮತ್ತು ಆರೋಪಿಗಳ ರಕ್ಷಣೆಯ ಬಗ್ಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಗಟನೆ ಕುರಿತು ಪ್ರತಿಕ್ರಿಯಿಸಿರುವ ನವಾದಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗ್ಲ ಆರೋಪಿಗಳ ವಿರುದ್ದ FIR ದಾಖಲಿಸುವುದಾಗಿ ತಿಳಿಸಿದ್ದಾರೆ ಮತ್ತು ಪ್ರಕರಣವನ್ನ ಮರೆಮಾಚಲು ಯತ್ನಿಸಿದವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.