• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೃಹ ಸಚಿವರ ಎಸ್ಕಾರ್ಟ್​ ವಾಹನಕ್ಕೆ ಬೈಕ್​ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in ಕರ್ನಾಟಕ
0
ಗೃಹ ಸಚಿವರ ಎಸ್ಕಾರ್ಟ್​ ವಾಹನಕ್ಕೆ ಬೈಕ್​ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು
Share on WhatsAppShare on FacebookShare on Telegram

ಹಾಸನ : ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಬೆಂಗಾವಲಾಗಿ ಬರುತ್ತಿದ್ದ ಪೊಲೀಸ್​ ವಾಹನಕ್ಕೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ದಾರುಣ ಘಟನೆಯು ಹಾಸನ ಜಿಲ್ಲೆ ಅರಸಿಕೇರೆ ತಾಲೂಕಿನ ಗಂಡಸಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದೆ. ಚಿಕ್ಕ ಗಂಡಸಿ ನಿವಾಸಿ ರಮೇಶ್​ (45) ಮೃತ ದುರ್ದೈವಿ. ವಾಹನ ಸವಾರ ರಮೇಶ್​​ ಹೆಲ್ಮೆಟ್​ ಧರಿಸದೇ ಇದ್ದದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಮೃತ ರಮೇಶ್​ ಮೃತದೇಹವನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ADVERTISEMENT

ಗೃಹ ಸಚಿವ ಆರಗ ಜ್ಞಾನೇಂದ್ರ ವಾಹನಕ್ಕೆ ಎಸ್ಕಾರ್ಟ್ ನೀಡುತ್ತಿದ್ದ ಡಿಆರ್​​ ಇನ್​ಸ್ಪೆಕ್ಟರ್​ ರಾಮು ಪೆಟ್ರೋಲ್​ ಬಂಕ್​ನಿಂದ ಮರಳುತ್ತಿದ್ದ ಸಂದರ್ಭದಲ್ಲಿ ರಮೇಶ್​ ಬೈಕ್​ನಲ್ಲಿ ಅಡ್ಡ ಬಂದಿದ್ದರು. ವಾಹನ ನಿಯಂತ್ರಿಸಲು ಸಾಧ್ಯವಾಗದೇ ಎಸ್ಕಾರ್ಟ್ ವಾಹನ ರಮೇಶ್​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಮೇಶ್​ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹಾಸನ ಎಸ್ಪಿ ಹರಿರಾಮ ಶಂಕರ್​ಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್​ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡು ರಮೇಶ್​ ಮೃತದೇಹ ಕುಟುಂಬಸ್ಥರಿಗೆ ರವಾನೆ ಆಗುವವರೆಗೂ ಸ್ಥಳದಲ್ಲಿಯೇ ಹಾಜರಿರುವಂತೆ ಎಸ್ಪಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರರ ಬೆಂಗಾವಲು ವಾಹನ

ರಮೇಶ್​ ಅಪಘಾತದಿಂದ ಮೃತಪಟ್ಟಿದ್ದರೂ ಲೆಕ್ಕಿಸದೇ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳದಿಂದ ತೆರಳಿದ್ದಾರೆ ಎಂಬ ಸ್ಥಳೀಯರ ಆರೋಪಗಳಿಗೆ ಸ್ಪಷ್ಟನೆ ನೀಡಿದ ಹಾಸನ ಎಸ್ಪಿ ಹರಿರಾಮ ಶಂಕರ್​, ಅಪಘಾತ ನಡೆದಾಗ ಆರಗ ಜ್ಞಾನೇಂದ್ರರಿಗೆ ಮಾಹಿತಿ ಇರಲಿಲ್ಲ. ಮಾಹಿತಿ ತಿಳಿದ ತಕ್ಷಣವೇ ನನಗೆ ಕರೆ ಮಾಡಿದ್ದಾರೆ. ರಮೇಶ್​ ಕುಟುಂಬಸ್ಥರ ಮಾಹಿತಿಯನ್ನು ಕಲೆ ಹಾಕುವಂತೆ ಸೂಚನೆ ನೀಡಿದ್ದಾರೆ. ಮಾತ್ರವಲ್ಲದೇ ಮೃತ ರಮೇಶ್​ ಕುಟುಂಬಕ್ಕೆ ಶೀಘ್ರದಲ್ಲಿಯೇ ಪರಿಹಾರ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ ಎಂದು ಹೇಳಿದ್ದಾರೆ. ಅಪಘಾತ ನಡೆದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಗಂಡಸಿ ಠಾಣಾ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Tags: Araseikereescort vehicleHassanHome Minister Araga Gyanendra
Previous Post

ಮತಎಣಿಕೆ: ತ್ರಿಪುರಾ, ನಾಗಲ್ಯಾಂಡ್‌’ನಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್‌’ಪಿಪಿ ಆರಂಭಿಕ ಮುನ್ನಡೆ

Next Post

ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ: ಓರ್ವ ಸಾವು

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ನಿಂತಿದ್ದ ಟ್ರಕ್’ಗೆ ಜೀಪ್ ಡಿಕ್ಕಿ: ಏಳು ಮಂದಿ ಸಾವು

ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ: ಓರ್ವ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada