ದೆಹಲಿ : ಅರಬ್ಬಿ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಿಪರ್ಜಾಯ್ ಚಂಡ ಮಾರುತದ ಪರಿಣಾಮವಾಗಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ಜೂನ್ 12ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಚಂಡಮಾರುತದಿಂದಾಗಿ ಕಠಿಣ ಹವಾಮಾನ ಮತ್ತು ಸಮುದ್ರದ ತೀರದಲ್ಲಿ ಮುಂದಿನ ಮೂರು-ನಾಲ್ಕು ದಿನ ಗಾಳಿಯ ವೇಗವು ಗಂಟೆಗೆ 135-145 ಕಿ.ಮೀ ರಿಂದ 160 ಕಿ.ಮೀ. ಇರಲಿದೆ. ಈ ಹಿನ್ನೆಲೆ ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.