• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಟ್ ಕಾಯಿನ್ ಹಗರಣ: ಮನೀಷ್ ಖರ್ಭೀಕರ್ ನೇತೃತ್ವದ ಎಸ್‌ಐಟಿ ತನಿಖಾ ತಂಡ ರಚಿಸಿದ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
July 4, 2023
in Top Story, ಕರ್ನಾಟಕ
0
ಬಿಟ್ ಕಾಯಿನ್ ಹಗರಣ: ಮನೀಷ್ ಖರ್ಭೀಕರ್ ನೇತೃತ್ವದ ಎಸ್‌ಐಟಿ ತನಿಖಾ ತಂಡ ರಚಿಸಿದ ಸರ್ಕಾರ
Share on WhatsAppShare on FacebookShare on Telegram

ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನ (SIT) ರಚನೆ ಮಾಡಿದೆ. ಈ ತನಿಖಾ ತಂಡದ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇಮಕ ಮಾಡಲಾಗಿದ್ದು, ಇವರ ನೇತೃತ್ವದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ಮರು ತನಿಖೆ ನಡೆಯಲಿದೆ. ಇನ್ನು ಈ ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್‌ಪಿ ಶರತ್ ಸಹ ಇರಲಿದ್ದು ಬಿಟ್ ಕಾಯಿನ್ ಹಗರಣದ ಮರು ತನಿಖೆ ನಿಸ್ಪಕ್ಷಪಾತವಾಗಿ ನಡೆಯಲಿದೆ ಅಂತ ಹೇಳಲಾಗುತ್ತಿದೆ

ADVERTISEMENT

ಇನ್ನು ಈ ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಜೊತೆ ಸಿಐಡಿ ಡಿಜಿ ಎಂ. ಎ. ಸಲೀಂ ಸಭೆ ನಡೆಸಿದ್ದು, ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ಬೇಕಾದ ರೂಪುರೇಷಗಳ ಬಗ್ಗೆ ಚರ್ಚೆಯನ್ನ ಕೂಡ ನಡೆಸಲಾಗಿದೆಯಂತೆ, ಈ ತನಿಖೆಯ ಪ್ರತಿಯೊಂದು ಹಂತದಲ್ಲೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ನಿರ್ಧರಿಸಿರುವ ತಂಡ ಫೈಲ್ ವರ್ಗಾವಣೆ, ಕೆಳಹಂತದಿಂದ ಯಾವೆಲ್ಲ ಅಧಿಕಾರಿಗಳು ತಂಡದಲ್ಲಿ ಇರಬೇಕು ಎಂಬುದರ ಬಗ್ಗೆಯೂ ಗಹನವಾದ ಚರ್ಚೆ ಮಾಡಲಾಗಿದೆಯಂತೆ. ಈಗಾಗಲೇ ಸಿಸಿಬಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ನ್ಯಾಯಾಲಯದ ಅನುಮತಿ ಪಡೆದು ತನಿಖೆ ಮುಂದುವರೆಸಲು ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ.

ರಾಜ್ಯದ್ಯಂತ ಬಹುದೊಡ್ಡ ಮಟ್ಟಿಗೆ ಚರ್ಚೆಗೆ ಗ್ರಾಸವಾಗಿದ್ದ ಬಿಟ್ ಕಾಯಿನ್ ಹಗರಣದ ಕುರಿತು ಈಗ ಸರ್ಕಾರ ಮರುತನಿಖೆಗೆ ಆದೇಶವನ್ನು ಹೊರಡಿಸಿರುವುದು ಮಾತ್ರವಲ್ಲದೆ, ಎಸ್ಐಟಿ ತಂಡವನ್ನ ರಚಿಸುವ ಮುಖಾಂತರ ಈ ಹಗರಣ ನಿಷ್ಪಕ್ಷಪಾತವಾಗಿ ನಡೆಯುವುದಕ್ಕೆ ಬೇಕಾದ ಎಲ್ಲಾ ರೀತಿಯಾದ ತಯಾರಿಗಳನ್ನ ಸರ್ಕಾರ ಮಾಡಿಕೊಂಡಿದೆ. ಆದರೆ ಇಲ್ಲಿ ಎಸ್ಐಟಿ ತಂಡ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಗಳೆ ಹೆಚ್ಚಾಗಿದ್ದು ಈ ಹಗರಣವನ್ನ ಸಿಬಿಐಗೆ ವಹಿಸುವಂತೆ ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡಗಳು ಬರುವ ಸಾಧ್ಯತೆಗಳು ಕೂಡ ದಟ್ಟವಾಗಿದೆ ಹೀಗಾಗಿ ಈ ಒತ್ತಡವನ್ನು ಸರ್ಕಾರ ಯಾವ ರೀತಿಯಲ್ಲಿ ನಿಭಾಯಿಸಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ

Tags: Basavaraj BommaiBJPcmsiddaramiahDKShivakumarKarnataka Government
Previous Post

ಬಿಡುಗಡೆಯಾಯ್ತು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ “ಗಣ” ಟೀಸರ್

Next Post

ಶಕ್ತಿ ಯೋಜನೆ ಮತ್ತು ಮಹಿಳಾ ಶ್ರಮಶಕ್ತಿಯ ಮುಂಚಲನೆ- ಭಾಗ 3

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಶಕ್ತಿ ಯೋಜನೆ ಮತ್ತು ಮಹಿಳಾ ಶ್ರಮಶಕ್ತಿಯ ಮುಂಚಲನೆ- ಭಾಗ 1

ಶಕ್ತಿ ಯೋಜನೆ ಮತ್ತು ಮಹಿಳಾ ಶ್ರಮಶಕ್ತಿಯ ಮುಂಚಲನೆ- ಭಾಗ 3

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada