ರಾಜ್ಯ ರಾಜಕೀಯದಲ್ಲಿ ಸದ್ಯ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದಿಂದ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಅಧಿಕಾರವನ್ನ ಕಳೆದುಕೊಳಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ, ಶಾಸಕ ಪ್ರಿಯಾಂಕ ಖರ್ಗೆ ಭವಿಷ್ಯ ನುಡಿದಿದ್ದಾರೆ.
ಬುಧವಾರ ಸುದ್ದಿಘೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕರವರು, ನಿಷ್ಪಕ್ಷಪಾತವಾಗಿ ತನಿಖೆ ನಡೆದರೆ ಸರ್ಕಾರವೇ ಪತನವಾಗಲಿದೆ ಬಿಜೆಪಿ ಮುಖಂಡರು, ಅವರ ಮಕ್ಕಳು, ಅಧಿಕಾರಿಗಳು ಈ ಹಗರಣದಲ್ಲಿ ಶಾಮೀಲಾಗಿದ್ದಾರೆ. ಸರ್ಕಾರ ಪ್ರಕರಣದ ತನಿಖೆಯನ್ನ ಜಾರಿ ನಿರ್ದೇಶನಾಲಯಕ್ಕೆ ಒಪ್ಪಿಸಿರುವುದಾಗಿ ಹೇಳುತ್ತಿದೆ. ಅದರ ಆದೇಶ ಪ್ರತಿಯನ್ನ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿಟ್ ಕಾಯಿನ್ ರೂಪದಲ್ಲಿ ಲಂಚ ಪಡೆಯಲಾಗುತ್ತಿದೆ. ಇದು 300-400 ಕೋಟಿ ರೂಪಾಯಿಗಳಿಗಿಂತ ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ. ಈ ಹಗರಣದಲ್ಲಿ ಒಂದು ವೇಳೆ ವಿಪಕ್ಷ ನಾಯಕರು ಭಾಗಿಯಾಗಿದ್ದರೆ ಅವರ ವಿರುದ್ದವು ತನಿಖೆ ನಡೆಸಿ ಅವರ ವಿರುದ್ದವು ಕ್ರಮ ಕೈಗೊಳ್ಳಲಿ ಸರ್ಕಾರ ತನಿಖೆಗೆ ಏಕೆ ವಿಳಂಬ ಮಾಡುತ್ತಿದೆ ಎಂದು ರಾಜ್ಯ ಸರ್ಕಾರವನ್ನ ಪ್ರಶ್ನಿಸಿದ್ದಾರೆ.