• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ

ಪ್ರತಿಧ್ವನಿ by ಪ್ರತಿಧ್ವನಿ
October 22, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ
Share on WhatsAppShare on FacebookShare on Telegram

ಬಿಜೆಪಿ ನಾಯಕರಿಗೆ ಬದ್ಧತೆ ಇದ್ದರೆ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ADVERTISEMENT

ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ

ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ, ಒಗ್ಗಟ್ಟಿನಿಂದ ಸಂಘಟನೆ ಮಾಡಿ

ಕಾಂಗ್ರೆಸ್ ಯೋಜನೆಗಳು ದೇಶಕ್ಕೆ ಮಾದರಿ, 2028ಕ್ಕೆ ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ

ರಾಯಚೂರು, ಅ. 22

“ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.

DK Shivakumar :  ನಾನೇ ಪ್ರಧಾನಿ ಮಂತ್ರಿ ಹತ್ರ ಬರ್ತೀನಿ ಹೋಗೋಣ #pratidhvani #dkshivakumar #siddaramaiah

ಪಂಚಮುಖಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಕಾರ್ಯಕರ್ತರ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಬುಧವಾರ ಮಾತನಾಡಿದರು.

“ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ 5300 ಕೋಟಿ ಇದುವರೆಗೂ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ” ಎಂದು ಕಿಡಿಕಾರಿದರು.

ಕೆಲಸ ಮಾಡುವವರನ್ನು ಪಕ್ಷ ಗುರುತಿಸುತ್ತದೆ

“ನಮ್ಮ ದೇಶದಲ್ಲಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನ ದೇವಾಲಯ ಎಲ್ಲಾ ಕಡೆ ಇವೆ. ಆಂಜನೇಯ ಸಮಾಜ ಸೇವಕ, ತ್ಯಾಗಿ. ಸಮಾಜದಲ್ಲಿ ಯಾರು ಸೇವೆ ಮಾಡುತ್ತಾರೋ ಸಮಾಜ ಅವರನ್ನು ಗುರುತಿಸುತ್ತದೆ. ಇದಕ್ಕೆ ಪಂಚಮುಖಿ ಆಂಜನೇಯನೇ ಸಾಕ್ಷಿ. ಹೀಗಾಗಿ ಜನರ ಮಧ್ಯೆ ನಿಷ್ಪಕ್ಷಪಾತವಾಗಿ, ಸೇವಾ ಮನೋಭಾವದಲ್ಲಿ ಕೆಲಸ ಮಾಡಿದರೆ ಸಮಾಜ ನಮ್ಮನ್ನು ಗುರುತುಸುತ್ತದೆ” ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ವ್ಯಕ್ತಿಗಿಂತ ಪಕ್ಷ ಮುಖ್ಯ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು. ನಾನು ಎಂದಿಗೂ ಗುಂಪು ರಾಜಕಾರಣ ಮಾಡಿಲ್ಲ. ಮಾಡಿದ್ದರೆ ಏನೇನೋ ಮಾಡಬಹುದಿತ್ತು. ಕಾಂಗ್ರೆಸ್ ಪಕ್ಷ ಇದ್ದರೆ, ನಾವು ನೀವು ಇರುತ್ತೇವೆ. ನಾನು ಉಪಮುಖ್ಯಮಂತ್ರಿಯಾಗಿರುವುದು, ದದ್ದಲ್ ಅವರು ಶಾಸಕರು ಹಾಗೂ ಅಧ್ಯಕ್ಷರಾಗಿದ್ದಾರೆ. ಬೋಸರಾಜು ಅವರು ಶಾಸಕರಲ್ಲದಿದ್ದರೂ ಅವರನ್ನು ಸಚಿವರಾನ್ನಾಗಿ ಮಾಡಲಾಗಿದೆ. ಆವರು 45 ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ತೆಲಂಗಾಣದಲ್ಲಿ ದುಡಿದಿದ್ದಾರೆ. ಹಗಲು ರಾತ್ರಿ ಪಕ್ಷ ಸಂಘಟನೆ ಮಾಡಿದ್ದಾರೆ” ಎಂದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕಾರಣಕ್ಕೆ ಕಾರ್ಯಕರ್ತರಿಗೆ ಗ್ಯಾರಂಟಿ ಸಮಿತಿ ಸೇರಿದಂತೆ ಅನೇಕ ನಿಗಮ ಮಂಡಳಿಯಲ್ಲಿ ಅಧಿಕಾರ ನೀಡಲಾಗಿದೆ. ಯಾರು ನಿಸ್ವಾರ್ಥದಿಂದ ದುಡಿಯುತ್ತಾರೋ ಅವರನ್ನು ಪಕ್ಷ ಸಮಾಜ ಗೌರವಿಸುತ್ತದೆ. ನಿಮಗೆ ಯಾವುದೇ ಹುದ್ದೆ ಸಿಕ್ಕಿರಲಿ ಅದನ್ನು ಸಣ್ಣದು, ಚಿಕ್ಕದು ಎಂದು ಭಾವಿಸಬೇಡಿ. ರಾಜಕಾರಣದಲ್ಲಿ ಯಾರು ಯಾವ ಮಟ್ಟಕ್ಕೆ ಬೇಕಾದರೂ ಬೆಳೆಯಬಹುದು” ಎಂದು ಸಲಹೆ ನೀಡಿದರು.

ಬೂತ್ ನಲ್ಲಿ ಮುನ್ನಡೆ ತರುವವನೇ ನಾಯಕ:

“ನೀವು ನಿಮ್ಮ ಬೂತ್ ಗಳಲ್ಲಿ ನಾಯಕತ್ವ ವಹಿಸಿಕೊಳ್ಳಬೇಕು. ಬಿಎಲ್ ಎಗಳು ನಮಗೆ ಬೂತ್ ಮಟ್ಟದಲ್ಲಿ ಮುನ್ನಡೆ ತಂದುಕೊಡುತ್ತಾರೆ. ಹೀಗಾಗಿ ಆತನೇ ನಿಜವಾದ ನಾಯಕ. ನಿಮ್ಮ ಹೋರಾಟ ಬಿಜೆಪಿ ಹಾಗೂ ದಳದವರ ಮೇಲೆ ಇರಬೇಕೆಹೊರತು ಕಾಂಗ್ರೆಸಿಗರ ಮೇಲಲ್ಲ. ದ್ವೇಷ ಮುಖ್ಯ ಅಲ್ಲ, ಸಂಘಟನೆ ಮುಖ್ಯ. ನಾವು ನಿಮಗೆ ಎಂತಹ ಸಂಘಟನೆ ನೀಡಿದ್ದೀವಿ. ಈ ದೇಶದ ಇತಿಹಾಸದಲ್ಲಿ ಯಾವುದೇ ರಾಜ್ಯ ಸರ್ಕಾರ ಮಾಡದ ಕೆಲಸ ನಾವು ಮಾಡುತ್ತಿದ್ದೇವೆ. ಕರ್ನಾಟಕ ಚುನಾವಣೆ ಬಳಿಕ ನಮ್ಮ ಸರ್ಕಾರ ಐದು ಗ್ಯಾರಂಟಿ ನೀಡಿದ್ದು, ಬಿಜೆಪಿ ನಾಯಕರು ಇದನ್ನು ಟೀಕೆ ಮಾಡಿದರು. ಯಡಿಯೂರಪ್ಪ ಆವರು ಒಂದು ಅಕ್ಕಿ ಕಾಳು ಕಡಿಮೆಯಾದರೂ ನಾವು ಸಹಿಸುವುದಿಲ್ಲ ಎನ್ನುತ್ತಿದ್ದರು. ನಾವು ಮೊದಲ ಸಂಪುಟ ಸಭೆಯಲ್ಲಿ ಎಲ್ಲಾ ಯೋಜನೆ ಜಾರಿಗೆ ಅನುಮೋದನೆ ನೀಡಲಾಯಿತು” ಎಂದು ಹೇಳಿದರು.

DK Shivakumar : ಮೋದಿ ಸಾಹೇಬ್ರು ನಿಮ್ಮ ಸರ್ಕಾರ ದಿವಾಳಿ ಆಗುತ್ತೆ ಅಂದ್ರು..! #pratidhvani #siddaramaiah

“ಬಡವರ ಬದುಕಿನ ಬಗ್ಗೆ ನಾವು ಚಿಂತನೆ ನಡೆಸಿ, ಐದು ಗ್ಯಾರಂಟಿ ನೀಡಿದೆವು. ಈ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದರು. ನಂತರ ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ನಮ್ಮ ಯೋಜನೆ ನಕಲು ಮಾಡಿದ್ದಾರೆ. ಈಗ ಬಿಹಾರದಲ್ಲಿ ಮಹಿಳೆಯರಿಗೆ ಒಂದೇ ಬಾರಿಗೆ 10 ಸಾವಿರ ನೀಡುತ್ತಿದ್ದಾರೆ. ಆಮೂಲಕ ನಮ್ಮ ಗ್ಯಾರಂಟಿ ಯೋಜನೆಗಳನ್ನು ಆವರು ನಕಲು ಮಾಡುತ್ತಿದ್ದಾರೆ. ಆ ಮೂಲಕ ನೀವು ಜನರ ಬಳಿ ಹೋಗಲು ಶಕ್ತಿ ತುಂಬಿದ್ದೇವೆ” ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಜನರ ಕಲ್ಯಾಣಕ್ಕೆ ಪ್ರತಿ ವರ್ಷ 1 ಲಕ್ಷ ಕೋಟಿ ಹಣ:

ನೀರಾವರಿ ಯೋಜನೆ ಮೂಲಕ ನಿಮಗೆ ಸಹಾಯ ಮಾಡಲು ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಅದಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ನೀಡುತ್ತಿದ್ದೇವೆ. 53 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ ವೆಚ್ಚ ಮಾಡಿದ್ದೇವೆ. ಇನ್ನು ಬೇರೆ ಇಲಾಖೆಗಳ ಕಲ್ಯಾಣ ಯೋಜನೆಗಳು ಸೇರಿಸಿದರೆ ಪ್ರತಿ ವರ್ಷ ನಮ್ಮ ಸರ್ಕಾರ 1 ಲಕ್ಷ ಕೋಟಿ ಹಣವನ್ನು ಜನರ ಜೇಬಿಗೆ ಹಾಕುತ್ತಿದೆ.

“ಆಮೂಲಕ ನಿಮಗೆ ಸರ್ಕಾರ ಶಕ್ತಿ ನೀಡಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಬ್ಯಾಂಕ್ ರಾಷ್ಟ್ರೀಕರಣ, ಆಹಾರ ಭದ್ರತಾ ಕಾಯ್ದೆ, ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ, ಪಿಂಚಣಿ ವ್ಯವಸ್ಥೆ, ನರೇಗಾ ನೀಡಿದೆವು. ಇಂತಹ ಒಂದು ಯೋಜನೆ ಬಿಜೆಪಿ ಆವರು ನೀಡಿದ್ದಾರಾ? ಬಡವರಿಗೆ ಸಹಾಯ ಮಾಡುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ” ಎಂದು ತಿಳಿಸಿದರು.

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನಮಗೆ ಅಧಿಕಾರ ಸಿಕ್ಕ ಕಾರಣಕ್ಕೆ ನಾವು ಐದು ಗ್ಯಾರಂಟಿ ನೀಡಿದ್ದೇವೆ. ಕಳೆದ ವರ್ಷ ಟಿಬಿ ಆಣೆಕಟ್ಟು ಗೇಟ್ ಮುರಿದಾಗ ವಿರೋಧ ಪಕ್ಷಗಳ ನಾಯಕರು ಟೀಕೆ ಮಾಡಿದರು. ನಾವು ಒಂದೇ ವಾರದಲ್ಲಿ ಹಗಲಿರುಳು ಶ್ರಮಿಸಿ ಗೇಟ್ ದುರಸ್ಥಿ ಮಾಡಿದೆವು. ಈಗ ಎಲ್ಲಾ ಗೇಟ್ ಗಳ ಬದಲಾವಣೆಗೆ ಆದೇಶ ನೀಡಿದ್ದೇವೆ. ಈ ಆಣೆಕಟ್ಟು ವಿಚಾರವಾಗಿ ಆಂಧ್ರ ಸಿಎಂ ಜೊತೆ ಚರ್ಚೆ ಮಾಡಲು ಮೂರು ಬಾರಿ ಪ್ರಯತ್ನ ಮಾಡಿದೆ. ಆದರೆ ಅವರು ಸಮಯ ನೀಡಲಿಲ್ಲ. ಈ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಪರಿಣಾಮ 30 ಟಿಎಂಸಿ ನೀರು ವ್ಯರ್ಥವಾಗುತ್ತಿದೆ. ಇದನ್ನು ಬಳಸಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಆಂಧ್ರ ಪ್ರದೇಶ ಸಹಕಾರ ನೀಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇರಬಾರದು. ನೀವೆಲ್ಲರೂ ಒಗ್ಗಟ್ಟಿನಿಂದ ಸಂಘಟನೆ ಮಾಡಬೇಕು. ಯಾವ ಗುಂಪು ಇರಬಾರದು. ಇಲ್ಲಿ ಕೇವಲ ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಇರಬೇಕು. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅದಕ್ಕೆ ನೀವು ಸಿದ್ಧತೆ ಮಾಡಿಕೊಳ್ಳಬೇಕು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಅನೇಕ ಜನರು ಪ್ರಯತ್ನಿಸುತ್ತಿದ್ದಾರೆ. ಹಳ್ಳಿಗಳಲ್ಲೂ ಪಕ್ಷ ಸೇರಲು ಜನ ಮುಂದೆ ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬರುವ ಎಲ್ಲರನ್ನು ಸೇರಿಸಿಕೊಳ್ಳಿ” ಎಂದು ಹೇಳಿದರು.

“ರಾಹುಲ್ ಗಾಂಧಿ ಆವರು ಭಾರತ ಜೋಡೋ ಯಾತ್ರೆ ಮಾಡಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋತಿಲ್ಲ. ರಾಹುಲ್ ಗಾಂಧಿ ನಮಗೆ ಅಷ್ಟು ಶಕ್ತಿ ನೀಡಿದ್ದಾರೆ. ಸೋನಿಯಾ ಗಾಂಧಿ ಆವರು ಎರಡು ಬಾರಿ ಪ್ರಧಾನಮಂತ್ರಿ ಹುದ್ದೆ ತ್ಯಾಗ ಮಾಡಿದ್ದಾರೆ. ಈ ದೇಶಕ್ಕೆ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಬೇಕು ಎಂದರು. ನಿಮ್ಮಲ್ಲಿ ಯಾರಾದರೂ ಪಂಚಾಯ್ತಿ ಸೀಟು ಬಿಟ್ಟುಕೊಡುತ್ತೀರಾ?” ಎಂದರು.

“ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಆವರು ಕೂತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಆವರು ಇಂದು ಕೂತಿದ್ದಾರೆ. ಆವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಆಡ್ವಾಣಿ ಆವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು ಖರ್ಗೆ ಆವರು ಮಾಡಿ ತೋರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರವಲ್ಲ, ಎಲ್ಲಾ ಪಕ್ಷದವರಿಗೂ ತಲುಪುತ್ತಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತಿ ವರ್ಷ ಹೆಚ್ಚುವಾರಿಯಾಗಿ 5 ಸಾವಿರ ಕೋಟಿ ಅನುದಾನ ನೀಡಲಾಗುತ್ತಿದೆ” ಎಂದು ತಿಳಿಸಿದರು.

Tags: ban on rss in karnatakaBJPbjp rss karnatakabolbhidu rss karnataka banCongress Partykarnataka government rss bankarnataka govt vs rsskarnataka rsskarnataka rss bankarnataka's rss ban rowrss ban controversy in karnatakarss ban in karnatakarss ban in karnataka newsrss ban karnatakarss banned in karnatakarss debate karnatakarss events banned karnatakarss in karnatakarss karnatakarss karnataka latestrss karnataka newsrss march in karnatakawill rss ban in karnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನಲ್ಲಿ ಮೋಳೆ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ

Next Post

ಬಿಜೆಪಿ ಶಾಸಕ ಹೇಳುವ ಪ್ರಕಾರ BJP ಪಕ್ಷವನ್ನು ವಿಶ್ವದ ಅತಿದೊಡ್ಡ NGO ನಿಯಂತ್ರಿಸುತ್ತಿದೆ..?

Related Posts

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಕರ್ನಾಟಕಕ್ಕೆ ಬರಬೇಕಾಗಿದ್ದ ಅನುದಾನ ವಿಚಾರದಲ್ಲಿ ಒಕ್ಕೂಟ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ತನ್ನ...

Read moreDetails
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

October 23, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

October 23, 2025
Next Post
ಬಿಜೆಪಿ ಶಾಸಕ ಹೇಳುವ ಪ್ರಕಾರ BJP ಪಕ್ಷವನ್ನು ವಿಶ್ವದ ಅತಿದೊಡ್ಡ NGO ನಿಯಂತ್ರಿಸುತ್ತಿದೆ..?

ಬಿಜೆಪಿ ಶಾಸಕ ಹೇಳುವ ಪ್ರಕಾರ BJP ಪಕ್ಷವನ್ನು ವಿಶ್ವದ ಅತಿದೊಡ್ಡ NGO ನಿಯಂತ್ರಿಸುತ್ತಿದೆ..?

Recent News

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
Top Story

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

by ಪ್ರತಿಧ್ವನಿ
October 23, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ
Top Story

ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

by ಪ್ರತಿಧ್ವನಿ
October 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada