ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಹಾಗೂ ಆರ್ ಅಶೋಕ್ ಗೆ ವಿಪಕ್ಷ ನಾಯಕನ ಸ್ಥಾನ ನೀಡಿದಕ್ಕೆ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಸ್ಪೋಟ ಬೆಳಗಾವಿ ಅಧಿವೇಶದವರೆಗೂ ಮುಟ್ಟಿದೆ. ಸೋಮವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಶುಭ ಕೋರಿಲ್ಲ ಎಂದು ಹೇಳಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಶುಭ ಕೋರಿಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸದ ಅವರು, ಎಲ್ಲಿಯವರೆಗೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವುದಿಲ್ಲವೋ ಅಲ್ಲಿಯತನಕ ನಾನು ಶುಭ ಕೊರುವ ಪ್ರಶ್ನೆಯೇ ಇಲ್ಲ ಎಂದು ಮತ್ತೆ ಅಸಮಾಧಾನವನ್ನ ಹೊರಹಾಕಿದ್ದಾರೆ. ಅಲ್ಲದೇ ಪ್ರತಿ ಬಾರೀಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಉತ್ತರ ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಅಲ್ಲಿಯತನಕ ನಾನು ಶುಭ ಕೋರುವುದಿಲ್ಲ ಎಂದು ಯತ್ನಾಳ್ ಹೇಳಿದರು.
ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ಎಂದು ಪ್ರಶ್ನಿಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಶಾಸಕಾಂಗ ಪಕ್ಷದ ಸಭೆಗೆ ಹೋಗುವುದಿಲ್ಲ ಎಂದಿದ್ದರು. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ ಎಂದು ಕಿಡಿಕಾರಿದ್ದಾರೆ.