• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

GBA ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಉಸ್ತುವಾರಿಯಾಗಿ ರಾಮ ಮಾಧವ್ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ರಾಜಕೀಯ
0
GBA ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಉಸ್ತುವಾರಿಯಾಗಿ ರಾಮ ಮಾಧವ್ ನೇಮಕ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಡಿಯಲ್ಲಿ ರಚನೆಯಾಗಿರುವ ಐದು ಮಹಾನಗರ ಪಾಲಿಕೆಗಳಿಗೆ ಈ ವರ್ಷದ ಜೂನ್ 30ರೊಳಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ರಾಜ್ಯದಲ್ಲಿ ಆಡಳಿತ ಕಳೆದುಕೊಂಡಿರುವ ಬಿಜೆಪಿ(BJP) ಈ ಚುನಾವಣೆಯನ್ನು ಗಂಭೀರವಾಗಿ ಎದುರಿಸಲು ಮುಂದಾಗಿದ್ದು, ಸಂಘಟನಾತ್ಮಕ ಸಿದ್ಧತೆಗಳಿಗೆ ಚಾಲನೆ ನೀಡಿದೆ.

Actor Sushma Veer On DGP Ramachandra Rao Viral video : ನಿಮ್ಮ ಆ.. ಕೆಲಸಕ್ಕೆ ಪೊಲೀಸ್ ಇಲಾಖೆಗೆ ಮುಜುಗರ

ಜಿಬಿಎ ಚುನಾವಣೆಗೆ ಪಕ್ಷದ ಸಮಗ್ರ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕಾತಿ ಆದೇಶ ಹೊರಡಿಸಿರುವುದು, ಬೆಂಗಳೂರು ಪಾಲಿಕೆ ಚುನಾವಣೆಗೆ ಬಿಜೆಪಿ ಎಷ್ಟು ಪ್ರಾಮುಖ್ಯತೆ ನೀಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.

ಇದನ್ನೂ ಓದಿ: ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಜಿಬಿಎ ಅಡಿಯಲ್ಲಿ ನಡೆಯಲಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಬಿಜೆಪಿಯ ಮುಖ್ಯ ಉಸ್ತುವಾರಿಯಾಗಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಚುನಾವಣಾ ಸಹ ಉಸ್ತುವಾರಿಗಳಾಗಿ ರಾಜಸ್ಥಾನ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರದ ಬಿಜೆಪಿ ಶಾಸಕ ಸಂಜಯ ಉಪಾಧ್ಯಾಯ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

ರಾಮ ಮಾಧವ್ ರಾಜಕೀಯ ಹಿನ್ನೆಲೆ ಏನು?

ರಾಮ ಮಾಧವ್ ಆರ್‌ಎಸ್‌ಎಸ್‌ನ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದವರು. ಸಂಘಟನಾತ್ಮಕ ಕೌಶಲ್ಯ, ಸೈದ್ಧಾಂತಿಕ ಬದ್ಧತೆ ಹಾಗೂ ಪ್ರಖರ ವಿಚಾರಧಾರೆಯಿಂದ ಅವರು ಪಕ್ಷದೊಳಗೆ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ನಂತರ ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು, ಜಮ್ಮು–ಕಾಶ್ಮೀರದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅವಧಿಯಲ್ಲೇ ಜಮ್ಮು–ಕಾಶ್ಮೀರದಲ್ಲಿ ಬಿಜೆಪಿ–ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗಿದ್ದು, ಇದು ಭಾರತೀಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ದಾಖಲಾಗಿತ್ತು. ಇಂತಹ ಅನುಭವಸ್ಥ ನಾಯಕನನ್ನು ಜಿಬಿಎ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿರುವುದು, ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಬಿಜೆಪಿ ಅತ್ಯಂತ ತಂತ್ರಾತ್ಮಕವಾಗಿ ಎದುರಿಸಲು ಮುಂದಾಗಿದೆ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ.

PM Modi on Children : ಮೋದಿ ನೀಡಿದ ಲಡ್ಡು ನಿರಾಕರಿಸಿದ ನಬಿನ್ ಪುತ್ರ..!  #children #nitinnabin #pratidhvani
Tags: BanglorebengaluruBJPcongressElections 2026GBAGBA ElectionGBA Election 2026KarnatakaKarnataka PoliticsPolitics
Previous Post

ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ- ಕಿಡಿಗೇಡಿ ಬಂಧನ

Next Post

ಪ್ರಯಾಣಿಕರೇ ಗಮನಿಸಿ..! ಮಹತ್ವದ ಸೂಚನೆ ಕೊಟ್ಟ ಬೆಂಗಳೂರು ಏರ್​​ಪೋರ್ಟ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಪ್ರಯಾಣಿಕರೇ ಗಮನಿಸಿ..! ಮಹತ್ವದ ಸೂಚನೆ ಕೊಟ್ಟ ಬೆಂಗಳೂರು ಏರ್​​ಪೋರ್ಟ್

ಪ್ರಯಾಣಿಕರೇ ಗಮನಿಸಿ..! ಮಹತ್ವದ ಸೂಚನೆ ಕೊಟ್ಟ ಬೆಂಗಳೂರು ಏರ್​​ಪೋರ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada