ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲೆ ಮಾಡುವ ಪ್ರಯತ್ನ ಬಿಜೆಪಿ ಮುಂದುವರಿಸಿದ್ದು, ನಿನ್ನೆ ಅವರ ಮೇಲೆ ಒತ್ತಡ ಹಾಕಿ ಅರ ಪುತ್ರ ವಿಜಯೇಂದ್ರ ಅವರನ್ನು ವರುಣಾದಲ್ಲಿ ನಿಲ್ಲಿಸಲು ಒತ್ತಾಯಿಸಲಾಗಿತ್ತು ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಗಂಭೀರ ಆರೋಪ ಹೊರಿಸಿದ್ದಾರೆ.
“ಜು.25, 2021 ಬಿಜೆಪಿ ಇತಿಹಾಸದಲ್ಲಿ ಕಪ್ಪು ಚುಕ್ಕೆ. ಕಾರಣ ಯಡಿಯೂರಪ್ಪ ಅವರು ಕಣ್ಣೀರು ಹಾಕಿ ರಾಜೀನಾಮೆ ನೀಡಿದರು. ಯಡಿಯೂರಪ್ಪ ಅವರನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಅವರನ್ನು ಮೂಲೆಗುಂಪು ಮಾಡಲು ಮುಂದಾಗಿದೆ. ಯಡಿಯೂರಪ್ಪ ಅವರು ವಿಜೇಂದ್ರ ಅವರನ್ನು ಎಂಎಲ್ ಸಿ ಮಾಡಿ ರಾಜ್ಯ ಸಂಪುಟದಲ್ಲಿ ಹಾಗೂ ರಾಂಘವೇಂದ್ರ ಅವರನ್ನು ಕೇಂದ್ರ ಸಂಪುಟದಲ್ಲಿ ಸೇರಿಸುವಂತೆ ಬಿಜೆಪಿ ನಾಯಕರಿಗೆ ತಿಳಿಸಿದರೂ ಇದುವರೆಗೂ ಯಾವುದೂ ಸಾಧ್ಯವಾಗಿಲ್ಲ. ವಿಜಯೇಂದ್ರ ಅವರ ಮೇಲೆ ಐದಾರೂ ಐಡಿ ಹಾಗೂ ಐಟಿ ಪ್ರಕರಣಗಳು ಬಾಕಿ ಇವೆ. ಇವುಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರ ವಿರುದ್ಧ ವಿಜಯೇಂದ್ರರನ್ನು ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ.” ಎಂದು ರಮೇಶ್ ಬಾಬು ಆರೋಪಿಸಿದ್ದಾರೆ.
“ಯಡಿಯೂರಪ್ಪ ಅವರು ಆರು ತಿಂಗಳ ಮುನ್ನವೇ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಆದರೆ ಈಗ ವರುಣಾದಲ್ಲಿ ಸ್ಪರ್ಧಿಸುವ ಬಗ್ಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಪಟ್ಟಿ ಇನ್ನು ಬಿಡುಗಡೆ ಮಾಡಿಲ್ಲ. ತಮ್ಮ ಪುತ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ಸಿಗುವ ಆತಂಕ ಯಡಿಯೂರಪ್ಪ ಅವರಿಗೆ ಇದೆ. ಒಳ ಮೀಸಲಾತಿ ವಿಚಾರದಲ್ಲಿ ಶಿಕಾರಿಪುರದಲ್ಲಿ ಯಾವ ಪರಿಸ್ಥಿತಿ ನಿರ್ಮಿಸಿದ್ದಾರೆ. ಇಂತಹ ಅನೇಕ ತಂತ್ರಗಾರಿಕೆಗಳನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. “ ಬಾಬು ಹೇಳಿದ್ದಾರೆ.