• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
December 18, 2025
in Top Story, ಕರ್ನಾಟಕ, ರಾಜಕೀಯ
0
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Share on WhatsAppShare on FacebookShare on Telegram

ಬೆಳಗಾವಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ(Krishna Byre Gowda) ವಿರುದ್ಧ ಅಧಿಕಾರ ದುರ್ಬಳಕೆ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ 21 ಎಕರೆ ಜಮೀನು ಕಬಳಿಸಿರುವ ಆರೋಪ ಕೇಳಿ ಬಂದಿದೆ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ(BY Vijayendra) ಪ್ರತಿಕ್ರಿಯಿಸಿದ್ದು, ಕಂದಾಯ ಸಚಿವರ ಅಕ್ರಮಗಳ ಕುರಿತಂತೆ ಇವತ್ತು ಸದನದಲ್ಲಿ ಧ್ವನಿ ಎತ್ತಲಿದ್ದೇವೆ ಎಂದು ತಿಳಿಸಿದ್ದಾರೆ.

ADVERTISEMENT
ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳೆ ಅಂತ ಹೇಳ್ಕೊಂಡು ತಪ್ಪು ಮಾಡಬಹುದಾ? ಶಾಸಕ ಯತ್ನಾಳ್ ಖಡಕ್ ಪ್ರಶ್ನೆ #pratidhvani

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವರ ವಿರುದ್ಧ ನಾವು ಮಾಡಿದ ಆರೋಪ ಗಂಭೀರ ಸ್ವರೂಪದ್ದು. ಕಂದಾಯ ಸಚಿವರಾದ ಅವರು ಸರಿಯಾಗಿ ದಾಖಲಾತಿ ಪರಿಶೀಲಿಸದೇ ‘ನಮ್ಮ ತಂದೆ ಕಾಲದ್ದು, ನಮ್ಮ ತಾತನ ಕಾಲದ್ದು’ ಎಂದು ಅಕ್ರಮ ನಡೆಸಬಹುದೇ, ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ ಹಾಗಿದ್ದರೆ ಎಂದು ಪ್ರಶ್ನಿಸಿದರು.

Power Minister Belagavi Session :   ಪೊಲೀಸರು ರೂಲ್ಸ್ ಪಾಲಿಸುತ್ತಿಲ್ಲ, ಬ್ರೇಕ್ ಮಾಡ್ತಿದ್ದಾರೆ..  #kjgeorge

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸಚಿವೆ ಸದನಕ್ಕೆ ತಪ್ಪು ಮಾಹಿತಿ ಕೊಡುವುದು ಖಂಡಿತ ಸರಿಯಲ್ಲ. ಗೃಹಲಕ್ಷ್ಮಿಕುರಿತು ತಪ್ಪು ಮಾಹಿತಿ ನೀಡಿದ ಸಚಿವರು ಅಪಹಾಸ್ಯಕ್ಕೆ ಒಳಗಾಗಿದ್ದಾರೆ. ಪ್ರಾಥಮಿಕ ಮಾಹಿತಿಯೂ ಸಚಿವರ ಬಳಿ ಇರದಿದ್ದರೆ ಅದು ಖಂಡಿತ ಸರಿಯಲ್ಲ ಎಂದರು.

ಹಳಿ ತಪ್ಪಿದ ಆಡಳಿತ

ಬರುವ ದಿನಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಬಂಡವಾಳ ಇನ್ನಷ್ಟು ಬಯಲಾಗಲಿದೆ. ತಾನೆಷ್ಟು ದಿನ ಮುಖ್ಯಮಂತ್ರಿಗಳಾಗಿ ಇರುತ್ತೇನೋ ಎಂಬ ಗೊಂದಲ ಸಿದ್ದರಾಮಯ್ಯ ಅವರನ್ನು ಕಾಡುತ್ತಿದೆ. ಕಳೆದೊಂದು ವರ್ಷದಲ್ಲಿ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಒಳಜಗಳ, ಡಿನ್ನರ್ ಮೀಟಿಂಗ್ ಬೆಳಗಾವಿಯಲ್ಲೂ ಮುಂದುವರೆದಿದೆ. ಸಿಎಂ, ಸಚಿವರು, ಶಾಸಕರ ನಡುವಿನ ಒಳಜಗಳದಿಂದ, ಸಿಎಂ ವಿಚಾರದಲ್ಲಿ ಪೈಪೋಟಿಯ ಪರಿಣಾಮವಾಗಿ ಆಡಳಿತ ಹಳಿ ತಪ್ಪಿದ್ದು ಸತ್ಯ ಎಂದು ಟೀಕಿಸಿದರು.

G Kumar Naik: ಸದನದಲ್ಲಿ ಭಗವದ್ಗೀತೆ ಶ್ಲೋಕ ಓದಿದ ಕಾಂಗ್ರೆಸ್‌ ಸಂಸದ ಕುಮಾರ್ ನಾಯಕ್‌..! #congressmp

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಭ್ರಷ್ಟಾಚಾರದ ಮೂಲಕ ಹೈಕಮಾಂಡ್‌ಗೆ ಹಣ ಸಂದಾಯ ಮಾಡುವುದು ಮುಂದುವರೆದಿದೆ. ಇದನ್ನು ಹಿಂದಿನಿಂದಲೂ ಹೇಳಿದ್ದೇನೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೂರಾರು ಕೋಟಿ ಪೋಲಾಗಿದೆ. ಬಳಿಕ ಒಂದಾದ ಮೇಲೊಂದು ಹಗರಣ ನಡೆಯುತ್ತಿದೆ ಎಂದರು.

G Kumar Naik: ಸದನದಲ್ಲಿ ಭಗವದ್ಗೀತೆ ಶ್ಲೋಕ ಓದಿದ ಕಾಂಗ್ರೆಸ್‌ ಸಂಸದ ಕುಮಾರ್ ನಾಯಕ್‌..! #congressmp

ಕಾಂಗ್ರೆಸ್ ಹೈಕಮಾಂಡನ್ನು ತೃಪ್ತಿ ಪಡಿಸುವ ಕಾರ್ಯ

ಗುತ್ತಿಗೆದಾರರಿಂದ ವಸೂಲಿ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಭ್ರಷ್ಟಾಚಾರ ಬಿಟ್ಟರೆ, ರಾಜ್ಯ ಸರಕಾರದಲ್ಲಿ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ. ಇವರಿಗೆ ಬಡವರಾದರೇನು? ಶ್ರೀಮಂತ ಆದರೇನು? ರಾಜ್ಯದಲ್ಲಿ ಲೂಟಿ ಮಾಡಿ, ಖಜಾನೆ ಖಾಲಿ ಮಾಡಿ ಕಾಂಗ್ರೆಸ್ ಹೈಕಮಾಂಡನ್ನು ತೃಪ್ತಿ ಪಡಿಸಿ ತಾವು ಅಧಿಕಾರದಲ್ಲಿ ಮುಂದುವರೆಯಬೇಕಿದೆ. ಇದೊಂದೇ ನಡೆಯುತ್ತಿದೆ ಎಂದು ಆರೋಪಿಸಿದರು

Tags: BJPBY VijayendracongressKarnataka PoliticsKrishna Byre GowdaLand GrabPoliticsWinter Session ̄2025
Previous Post

BPL Card: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ..?

Next Post

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada